ಕೋಲಾರ: ನಾನು ಕೋಲಾರ ದಲ್ಲಿ ಸ್ಪರ್ಧಿಸಿದರೂ 200% ಗೆಲ್ತೀನಿ. ಆದರೆ ಅಂತಿಮವಾಗಿ ಎಲ್ಲಿ ಸ್ಪರ್ಧಿಸಬೇಕು ಅನ್ನೋದು ಹೈಕಮಾಂಡ್ ನಿರ್ಧರಿಸುತ್ತೆ ಎಂದು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ಪಕ್ಷದಲ್ಲಿ ಯಾರು ಸಹ ಕನಸು ಕಾಣುತ್ತಿಲ್ಲ, ನಮ್ಮ ಪಕ್ಷ ಅಧಿಕಾರಕ್ಕೆ ಬರುತ್ತೆ ಅಂತಾ ವಾಸ್ತವ ಸತ್ಯಾಂಶ ಹೇಳಿದ್ದೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಯವರು ಯಡಿಯೂರಪ್ಪರನ್ನೇ ಪಂಚರ್ ಮಾಡಿದ್ದಾರೆ. ಅದಕ್ಕಾಗಿ ಅವರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಬಿಜೆಪಿ ಸರ್ಕಾರದ ವಿರುದ್ಧ 40% ಗಂಭೀರ ಆರೋಪವಿದೆ. ಬಿಜೆಪಿಯ ವಚನಭ್ರಷ್ಟ, ದುರಾಡಳಿತದಿಂದ ಜನ ಬೇಸತ್ತಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಹೋಗಿದ್ದರಿಂದ ಜನಸಾಮಾನ್ಯರು ತತ್ತರಿಸಿದ್ದಾರೆ ಎಂದರು.
ಹೈಕಮಾಂಡ್ ತೀರ್ಮಾನವೇ ಅಂತಿಮವಾಗಲಿದೆ. ಇಲ್ಲಿ ಯಾವುದೇ ಕಾರಣಕ್ಕೂ ತಪ್ಪು ಸಂದೇಶ ಹೋಗಬಾರದು. ನೀವು ಯಾವುದೇ ಕಾರಣಕ್ಕೂ ಸಂಶಯ ಪಡಬೇಡಿ.ಸಿದ್ದರಾಮಯ್ಯ ಇಲ್ಲಿ ಬರೋದಿಲ್ಲ, ಜನರ ಕಷ್ಟ ಸುಖ ಕೇಳೋದಿಲ್ಲ. ಸಿದ್ದರಾಮಯ್ಯ ಹೊರಗಿನವರು ಅಂತ ಅಪಪ್ರಚಾರ ಮಾಡ್ತಾರೆ. ಆದರೆ ಈಗ ಮಾತು ಕೊಡುತ್ತೇನೆ, ಪ್ರತಿ ವಾರ ಕ್ಷೇತ್ರಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದರು .