ಬೆಳಗಾವಿ: ಬಿಜೆಪಿ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಕಾಂಗ್ರೆಸ್ಗೆ ಬಂದರೆ ಸ್ವಾಗತ ಮಾಡುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿ ಹಿರಿಯ ನಾಯಕರನ್ನು ಸರಿಯಾಗಿ ನಡೆಸಿಕೊಂಡಿಲ್ಲ. ಕೆಎಸ್ ಈಶ್ವರಪ್ಪ ಪಕ್ಷದ ಸಿದ್ಧಾಂತ ಎನ್ನುತ್ತಿದ್ದರು, ಈಗ ಎಲ್ಲಿಗೆ ಹೋದರು? ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಯಿಂದ ಪಕ್ಷಕ್ಕೆ ಲಾಭ ಆಗಲಿದೆ. ಲಕ್ಷ್ಮಣ ಸವದಿ ಕೇಳಿದ ಕಡೆ ಪ್ರಚಾರದ ಜವಾಬ್ದಾರಿ ಕೊಡುತ್ತೇವೆ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ, ಸವದಿ ಯಾವುದೇ ಷರತ್ತು ನಮ್ಮ ಮುಂದಿಟ್ಟಿಲ್ಲ. ಕಾಂಗ್ರೆಸ್ ಅಸ್ತಿತ್ವಕ್ಕೆ ಬಂದ ಬಳಿಕ ಕ್ಷೇತ್ರದ ಅಭಿವೃದ್ಧಿಗೆ ಸಹಕಾರ ನೀಡಬೇಕು ಮತ್ತು ಗೌರವಯುತವಾಗಿ ನಡೆಸಿಕೊಳ್ಳಬೇಕು ಎಂದಷ್ಟೇ ಹೇಳಿದ್ದಾರೆ ಎಂದು ತಿಳಿಸಿದ್ದರು ಎಂದು ಸವದಿ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸಿದರು.
ಇನ್ನೂ ಇದೇ ವಿಚಾರವಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಜಗದೀಶ್ ಶೆಟ್ಟರ್ ರನ್ನು ಕಾಂಗ್ರೆಸ್ ಗೆ ಆಹ್ವಾನಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಗದೀಶ್ ಶೆಟ್ಟರ್ ಒಂದು ಟಿಕೆಟ್‌ಗಾಗಿ ಮನೆಯ ಬಾಗಿಲು ಬಾಗಿಲು ಓಡಾಡುತ್ತಿದ್ದಾರೆ. ಲಕ್ಷ್ಮಣ ಸವದಿ ಟಿಕೆಟ್ ಸಿಗದೇ ಕಣ್ಣೀರು ಹಾಕಿ ಕೊನೆಗೂ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ ಎಂದರು.