ಬೆಂಗಳೂರು : ಮೋದಿಯವರು ರಾಜ್ಯದ ಕಡೆ ಮುಖ ಮಾಡುವ ವೇಳೆಗೆ ಬಿಜೆಪಿಯ ಸುಳ್ಳಿನ ಕಾರ್ಖಾನೆಯ ಕಾರ್ಮಿಕರು ಸುಳ್ಳುಗಳ ಉತ್ಪಾದನೆಯಲ್ಲಿ ತೊಡಗಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಪ್ರಧಾನಿ ಮೋದಿಯವರಿಗೆ ಸಂಪ್ರದಾಯದಂತೆ ಕರ್ನಾಟಕ ನೆನಪಾಗಿದೆ. ಹೀಗಾಗಿ, ಮೇಲಿಂದ ಮೇಲೆ ರಾಜ್ಯಕ್ಕೆ ಸೈಕಲ್ ತುಳಿಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಕೇಂದ್ರ ಸರ್ಕಾರ ತಮಗೆ ಮತ ಹಾಕಿದವರ ಬದುಕನ್ನೂ ಹೈರಾಣ ಮಾಡಿಟ್ಟು ಕೇವಲ ಸುಳ್ಳಿನ ಕಾರ್ಖಾನೆಯಲ್ಲಿ ಉತ್ಪಾದಿಸುವ ಸುಳ್ಳಿನ ಆಧಾರದಲ್ಲಿ ತನ್ನ ಸಂಪ್ರದಾಯದಂತೆ ಜನರನ್ನು ಬಕ್ರಾ ಮಾಡಲು ಮುಂದಾಗಿದೆ.ನೆಹರು ಅವರಿಂದ ಹಿಡಿದು ಪಿ.ವಿ ನರಸಿಂಹರಾವ್‌ವರೆಗೆ 145 ಬೃಹತ್ ಸರ್ಕಾರಿ ಕಂಪೆನಿ, ಉದ್ದಿಮೆಗಳನ್ನು ಸ್ಥಾಪಿಸಲಾಗಿತ್ತು. ಮೋದಿಯವರು ಮಾತ್ರ ಒಂದೇ ಒಂದು ಕಂಪೆನಿಯನ್ನೂ ಸ್ಥಾಪಿಸದೆ, ಹಿಂದಿನವರು ಆರಂಭಿಸಿದ್ದ 23 ಕಂಪೆನಿಗಳನ್ನು ಮಾರಾಟ ಮಾಡಿದ್ದಾರೆ.
ದೇಶ ಸಾಲದ ಸುಳಿಯಲ್ಲಿ ಸಿಲುಕಿ ಜನರ ಮೇಲೆ ವಿಪರೀತ ತೆರಿಗೆ ವಿಧಿಸಲಾಗುತ್ತಿದೆ. ಪೆಟ್ರೋಲ್–ಡೀಸೆಲ್ ಬೆಲೆಗಳು ಗಗನ ಮುಟ್ಟಿವೆ. ಇಷ್ಟಾದರೂ ದೇಶದ ಆದಾಯ ಹೆಚ್ಚುತ್ತಿಲ್ಲ. 1960ರಲ್ಲಿ ದೇಶದ ತಲಾವಾರು ಜಿಡಿಪಿ 82 ಡಾಲರ್‌ಗಳಷ್ಟಿತ್ತು. 2014ರ ವೇಳೆಗೆ ಇದು 1574 ಡಾಲರ್‌ಗೆ ಏರಿಕೆಯಾಯಿತು.
ಬಡವರಿಗೆ ಉಚಿತ ಸಂಪರ್ಕ ಕೊಟ್ಟಿದ್ದೇವೆಂದು ಹೇಳುತ್ತಾರೆ. ಸಂಪರ್ಕ ಪಡೆದವರು ರೀಫಿಲ್ ಮಾಡಿಸಲು ಹಣವಿಲ್ಲದೆ ಮತ್ತೆ ಸೌದೆ ಬಳಸಲು ಪ್ರಾರಂಭಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.