ಬೆಂಗಳೂರು: ಬಿಜೆಪಿ ಇರುವವರೆಗೆ ಶಾಂತಿ, ನೆಮ್ಮದಿ ಇರಲ್ಲ, ಬಿಜೆಪಿ ನಾಯಕರು ಜಾತಿ, ಧರ್ಮದ ಹೆಸರಲ್ಲಿ ಸಮಾಜ ಒಡೆಯುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಬಿಜೆಪಿಯವರು ಯಾರೂ ಕೂಡಾ ಸ್ವತಂತ್ರ ಹೋರಾಟದಲ್ಲಿ ಸತ್ತಿಲ್ಲ, ಕಾಂಗ್ರೆಸ್ ಭಯೋತ್ಪಾದನಗೆ ಬೆಂಬಲ ನೀಡುತ್ತದೆ ಎಂದು ಬಿಜೆಪಿಯವರು ಹೇಳುತ್ತಾರೆ. ಆದರೆ, ಬಿಜೆಪಿಯ ಯಾವುದೇ ನಾಯಕರೂ ಭಯೋತ್ಪಾದನೆಯಿಂದ ಪ್ರಾಣ ಕಳೆದುಕೊಂಡಿಲ್ಲ ಎಂದರು. ಇನ್ನೂ ಕೇಂದ್ರ ಸರ್ಕಾರದಿಂದ ನಮ್ಮ ಪಾಲಿನ ತೆರಿಗೆ ಪಾಲನ್ನು ಸರಿಯಾಗಿ ಪಡೆಯದ ಹಿಂದಿನ ಬಿಜೆಪಿ ಸರ್ಕಾರ ‘ಯೂಸ್ ಲೆಸ್’ ಎಂದು ವಾಗ್ದಾಳಿ ನಡೆಸಿದ್ದಾರೆ.
ಬ್ರಿಟಿಷ್ ಓಡಿಸಿ ಸ್ವತಂತ್ರ ಕೊಡಿಸಿದ್ದು, ಕಾಂಗ್ರೆಸ್ ಪಕ್ಷವಾಗಿದೆ. ಸ್ವತಂತ್ರ ಬೆಲೆ ಕಾಂಗ್ರೆಸ್ ಪಕ್ಷಕ್ಕೆ ಗೊತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಗೊಳಿಸಲು ಕಾಂಗ್ರೆಸ್ ಕಾರಣ. ಮಾತಿಗೆ ಮಾತ್ರ ಸಬ್ ಕಾ ಸಥ್ ಎನ್ನುತ್ತಾರೆ. ಎಲ್ಲರನ್ನೂ ಒಗ್ಗೂಡಿಸಿಕೊಂಡು ಹೋಗಲ್ಲ ಎಂದು ವಾಗ್ದಾಳಿ ನಡೆಸಿದರು,ರಾಜೀವ್ ಗಾಂಧಿ ದಾರಿಯಲ್ಲಿ ನಡೆಯುವ ಪ್ರಯತ್ನ ಮಾಡೋಣ. ಮೋದಿ ಭಯೋತ್ಪಾದನೆ ತೊಲಗಬೇಕು ಎಂದು ಹೇಳುತ್ತಾರೆ. ಮೊದಲೇ ಕಾಂಗ್ರೆಸ್ ಈ ವಿಚಾರವಾಗಿ ಹೋರಾಟ ಮಾಡಿತ್ತು. ಭಯೋತ್ಪಾದನೆಗೆ, ಖಲಿಸ್ತಾನ ಉಗ್ರರಿಗೆ ಇಂದಿರಾ ಗಾಂಧಿ ಬಲಿಯಾಗಿದ್ದಾರೆ ಎಂದಿದ್ದಾರೆ.
ನಾವು ಬಿಜೆಪಿ ಹಗರಣ ಪ್ರಸ್ತಾಪ ಮಾಡಿದೇವು, ಹೀಗಾಗಿ ಜನರು ನಮಗೆ ಬಹುಮತ ಕೊಟ್ಟಿದ್ದಾರೆ. ಬಿಜೆಪಿ ಕಾಲದಲ್ಲಿ ಮೂರು ಸಿಎಂ ಆಗಿದ್ದರು ಇದರಿಂದ ಹೇಗೆ ಅಭಿವೃದ್ಧಿ ಸಾಧ್ಯವಾಗುತ್ತದೆ. ನಾವು ಕೊಟ್ಟ ಮಾತು ಉಳಿಸಿಕೊಳ್ಳುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.