ಬೆಂಗಳೂರು : ನಾನು ಕೋಲಾರ ಹಾಗೂ ವರುಣಾ ಎರಡೂ ಕ್ಷೇತ್ರದಿಂದ ಟಿಕೆಟ್ ಕೇಳಿದ್ದೇನೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿ, ನಾನು ಎರಡು ಕ್ಷೇತ್ರಗಳಲ್ಲೂ ನಿಲ್ತೀನಿ. ಕೋಲಾರ ಮತ್ತು ವರುಣ ಎರಡು ಕ್ಷೇತ್ರಗಳನ್ನು ಕೇಳಿದ್ದೇನೆ. ಹೈಕಮಾಂಡ್ ಹೇಳಿದ್ರೆ ಎರಡು ಕಡೆ ನಿಲ್ತೀನಿ ಎಂದಿದ್ದಾರೆ. ಇದು ಪ್ರಜಾಪ್ರಭುತ್ವದ ಕರಾಳ ದಿನ. ಬಿಜೆಪಿ ರಾಹುಲ್ ಗಾಂಧಿಯವರಿಗೆ ಹೆದರಿಕೊಂಡಿದ್ದಾರೆ. ಕೋರ್ಟ್ ಒಂದು ತಿಂಗಳು ಸಮಯ ನೀಡಿದೆ. ಆದ್ರೂ ತರಾತುರಿಯಲ್ಲಿ ಈ ನಿರ್ಧಾರ ಮಾಡಲಾಗಿದೆ. ತರಾತುರಿಯಲ್ಲಿ ರಾಹುಲ್ ಅವರನ್ನು ಅನರ್ಹ ಮಾಡಿದ್ದಾರೆ ಎಂದುರಾಹುಲ್ ಗಾಂಧಿ ಸದಸ್ಯತ್ವ ಅನರ್ಹ ವಿಚಾರವಾಗಿ ಪ್ರತಿಕ್ರಿಯಿಸಿದರು.
ನಮ್ಮ ಅಧಿಕಾರ ಅವಧಿಯಲ್ಲಿ ಕೊಟ್ಟ ಭರವಸೆ ಈಡೇರಿಸಿದ್ದೇವೆ. ನಾವು ಕೊಟ್ಟ ಮಾತಿಗೆ ತಪ್ಪುವವರಲ್ಲ. ಮುಂದೆ ಕೂಡಾ ಅಧಿಕಾರಕ್ಕೆ ಬಂದರೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಈಡೇರಿಸುತ್ತೇವೆ ಎಂದರು. ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ದಾಳಿ ಮಾಡಲಾಗಿದೆ. ನಾವು ಇದನ್ನು ಖಂಡಿಸುತ್ತೇವೆ. ನ್ಯಾಯಾಲಯದಲ್ಲಿ ಈ ವಿಚಾರವಾಗಿ ಹೋರಾಟ ಮಾಡುತ್ತೇವೆ. ನಮಗೆ ನ್ಯಾಯ ಸಿಗುವ ಭರವಸೆ ಇದೆ ಎಂದು ಡಿಕೆಶಿ ಹೇಳಿದ್ದರು.