Thursday, June 8, 2023
spot_img
- Advertisement -spot_img

RCB ನನ್ನ ಹೆಮ್ಮೆಯ ತಂಡ, ಇಂದಲ್ಲ ನಾಳೆ ನಮ್ಮವರೂ ಕಪ್ ಗೆಲ್ತಾರೆ : ಸಿದ್ದು ಟ್ವೀಟ್

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವೀಕ್ಷಣೆ ಮಾಡಿದರು. ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್‌ನಲ್ಲಿ ತಮ್ಮ ಅಭಿಪ್ರಾಯ ಪೋಸ್ಟ್ ಮಾಡಿದ್ದಾರೆ.

ಕ್ರಿಕೆಟ್ ನನ್ನ ಇಷ್ಟದ ಆಟ, ಆರ್‌ಸಿಬಿ ನನ್ನ ಹೆಮ್ಮೆಯ ತಂಡ.. ನನ್ನಂತಹ ಕೋಟ್ಯಂತರ ಅಭಿಮಾನಿಗಳ ಹಾರೈಕೆ ಆರ್.ಸಿ.ಬಿ ಹುಡುಗರ ಜೊತೆಗಿದೆ.. ಇಂದಲ್ಲ ನಾಳೆ ನಮ್ಮವರೂ ಕಪ್ ಗೆಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ. ಓರ್ವ ಕನ್ನಡಿಗನಾಗಿ ನನ್ನ ಬೆಂಬಲ‌ ಯಾವಾಗಲೂ ನಮ್ಮ ಆರ್‌ಸಿಬಿಗೆ ಎಂದು ಬರೆದಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆ ಕಾವು ರಾಜ್ಯದಲ್ಲಿ ದಿನದಿಂದ ಹೆಚ್ಚಳವಾಗುತ್ತಿದ್ದು, ಸಿದ್ದರಾಮಯ್ಯ ಆರ್​ಸಿಬಿ ಪಂದ್ಯ ವೀಕ್ಷಣೆ ಮಾಡಿದ್ದಾರೆ. 3 ಪಕ್ಷಗಳ ನಾಯಕರು ಪ್ರಚಾರದಲ್ಲಿ ಬ್ಯುಸಿಯಾಗಿದ್ದು,ಈ ಎಲ್ಲಾ ಒತ್ತಡಗಳ ನಡುವೆಯೂ ಮಾಜಿ ಸಿಎಂ ಸಿದ್ದರಾಮಯ್ಯ ಮ್ಯಾಚ್‌ ನೋಡಿದ್ದಾರೆ. ಸಿದ್ದರಾಮಯ್ಯನವರಿಗೆ ಮಾಜಿ ಸಚಿವ ಬಸವರಾಜ ರಾಯರೆಡ್ಡಿ, ವಿಧಾನ ಪರಿಷತ್ ಸ್ಪೀಕರ್​ ಬಸವರಾಜ ಹೊರಟ್ಟಿ ಸಾಥ್​ ನೀಡಿದ್ದಾರೆ.

Related Articles

- Advertisement -spot_img

Latest Articles