ಬೆಂಗಳೂರು: ಎಲೆಕ್ಷನ್ ಗಾಗಿ ಪಕ್ಷದ ಕಾರ್ಯಕರ್ತರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಧನ್ಯವಾದ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿ, ‘ಕಾಂಗ್ರೆಸ್ ಹೆಮ್ಮೆಯ ಕಾರ್ಯಕರ್ತರು ಮತ್ತು ಅಭಿಮಾನಿ ಬಂಧುಗಳೇ, ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ರಾತ್ರಿ-ಹಗಲೆನ್ನದೆ, ಊಟ-ತಿಂಡಿ-ವಿಶ್ರಾಂತಿಯನ್ನು ಮರೆತು ನಿರಂತರವಾಗಿ ಕೆಲಸ ಮಾಡಿದ ನಿಮಗೆಲ್ಲರಿಗೂ ಅಭಿನಂದನೆಗಳು ಮತ್ತು ನನ್ನ ಧನ್ಯವಾದಗಳು’ ಎಂದು ಹೇಳಿದ್ದಾರೆ.
ನಾನು ಸ್ಪರ್ಧಿಸುತ್ತಿರುವ ವರುಣಾ ಕ್ಷೇತ್ರಕ್ಕೆ ರಾಜ್ಯದ ಮೂಲೆಮೂಲೆಗಳಿಂದ ಮಾತ್ರವಲ್ಲ, ಬೇರೆ ರಾಜ್ಯಗಳಿಂದಲೂ ಬಂದು ನನ್ನ ಮೇಲಿನ ಪ್ರೀತಿ-ಅಭಿಮಾನದಿಂದ ತಮ್ಮ ಪಾಡಿಗೆ ತಾವು ಪ್ರಚಾರ ಮಾಡಿದ್ದಾರೆ. ಅವರಲ್ಲೆರನ್ನು ನನಗೆ ಭೇಟಿ ಮಾಡಿ ಧನ್ಯವಾದಗಳನ್ನು ತಿಳಿಸಲು ಕೂಡಾ ಸಾಧ್ಯವಾಗಿಲ್ಲ’ ಎಂದೂ ತಿಳಿಸಿದ್ದಾರೆ.
ಈ ಪ್ರೀತಿ ಮತ್ತು ಅಭಿಮಾನವೇ ನನ್ನ ಮತ್ತು ಕಾಂಗ್ರೆಸ್ ಪಕ್ಷದ ಶಕ್ತಿ. ಇವರೆಲ್ಲರಿಗೂ ನನ್ನ ಹೃದಯಪೂರ್ವಕ ಕೃತಜ್ಞತೆಗಳು’ ಎಂದು ಹೇಳಿದ್ದಾರೆ. ಈಗ ಸ್ವಲ್ಪ ಬಿಡುವು ಮಾಡಿಕೊಂಡು ತಂದೆ-ತಾಯಿ, ಹೆಂಡತಿ ಮಕ್ಕಳ ಜೊತೆ ಕಾಲ ಕಳೆಯಿರಿ. ಪ್ರಾಮಾಣಿಕವಾದ ನಮ್ಮ ಹೋರಾಟ ಖಂಡಿತ ಫಲಪ್ರದವಾಗುತ್ತದೆ. ಮತ್ತೊಮ್ಮೆ ನಿಮಗೆಲ್ಲರಿಗೆ ಧನ್ಯವಾದಗಳು ಮತ್ತು ಶುಭಾಶಯಗಳು’ ಎಂದು ತಿಳಿಸಿದ್ದಾರೆ.