Saturday, June 10, 2023
spot_img
- Advertisement -spot_img

ಹಾರ-ತುರಾಯಿ, ಶಾಲು ಕೊಡ್ಬೇಡಿ, ಪುಸ್ತಕ ಕೊಡಿ : ಸಿದ್ದರಾಮಯ್ಯ ಮನವಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ಮುಂದೆ ಹಾರ-ತುರಾಯಿ, ಶಾಲುಗಳನ್ನು ಗೌರವ ರೂಪದಲ್ಲಿ ಸ್ವೀಕರಿಸಬಾರದು ಎಂದು ನಿರ್ಧರಿಸಿದ್ದು, ಈ ಬಗ್ಗೆ ಟ್ವೀಟ್ ಮಾಡಿ ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ. . “ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು. ನಿಮ್ಮೆಲ್ಲರ ಪ್ರೀತಿ-ಅಭಿಮಾನ ಸದಾ ನನ್ನ ಮೇಲಿರಲಿ.” ಎಂದು ಟ್ವೀಟ್ ಮಾಡಿ ಮನವಿ ಮಾಡಿಕೊಂಡಿದ್ದಾರೆ.

ಸಿದ್ದರಾಮಯ್ಯ ಅವರ ಈ ಸರಳ ನಡೆಗೆ ಅಭಿಮಾನಿಗಳು ಭಾರಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಿಮ್ಮ ನಡೆ ಎಲ್ಲರಿಗೂ ಮಾದರಿಯಾಗಲಿ ಎಂದು ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ. ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯ.” ಎಂದು ಹೇಳಿದ್ದಾರೆ.

ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯ ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ. ಜೀರೊ ಟ್ರಾಫಿಕ್‌ನಿಂದ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ತೊಂದರೆಯಾಗಿದೆ , ಹೀಗಾಗಿ ಈ ನಿರ್ಧಾರ ಕೈಗೊಂಡಿದ್ದೇನೆ ಎಂದಿದ್ದರು.

Related Articles

- Advertisement -spot_img

Latest Articles