Wednesday, May 31, 2023
spot_img
- Advertisement -spot_img

ಸಿಆರ್‌ಪಿಎಫ್ ನೇಮಕಾತಿ ಪರೀಕ್ಷೆ ಕನ್ನಡದಲ್ಲಿ ಬರೆಯಲು ಅವಕಾಶ ಕೊಡಿ

ಬೆಂಗಳೂರು: ಸಿಆರ್‌ಪಿಎಫ್ ನೇಮಕಾತಿ ಪರೀಕ್ಷೆಯನ್ನು ಕನ್ನಡದಲ್ಲೂ ಬರೆಯಲು ಕೂಡಲೇ ಅವಕಾಶ ನೀಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಕುರಿತು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸರಣಿ ಟ್ವೀಟ್ ಮಾಡಿದ್ದಾರೆ. ಭಾಷೆ ಜ್ಞಾನವನ್ನು ಪ್ರತಿಬಿಂಬಿಸುವುದಿಲ್ಲ ಮತ್ತು ಅದು ಕೇವಲ ಸಂವಹನ ಮಾಧ್ಯಮವಾಗಿದೆ. ಕನ್ನಡ ಮಾಧ್ಯಮದಲ್ಲಿ ಓದಿದ ಅಭ್ಯರ್ಥಿಗಳು ಬುದ್ಧಿವಂತರಾಗಿದ್ದರೂ, ಭಾಷೆಯ ಅಡಚಣೆಯಿಂದ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಸಾಧ್ಯವಾಗುತ್ತಿಲ್ಲ. ಇದರಿಂದ ನಮ್ಮ ಯುವಕರಿಗೆ ಅನ್ಯಾಯವಾಗುತ್ತಿದೆ ಎಂದು ಹೇಳಿದ್ದಾರೆ.

CRPF ಪರೀಕ್ಷೆಯನ್ನು ಕನ್ನಡದಲ್ಲಿ ನಡೆಸದೆ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ನಡೆಸುವ ನಿರ್ಧಾರವನ್ನು ಹಿಂಪಡೆಯಬೇಕು, ಕನ್ನಡಿಗರಿಗೆ ನೆರವಾಗಬೇಕು ಎಂದು ಮನವಿ ಮಾಡಿದ್ದಾರೆ.

Related Articles

- Advertisement -

Latest Articles