Thursday, June 8, 2023
spot_img
- Advertisement -spot_img

ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆಗೆ ಅಭಿಮಾನಿಗಳಿಂದ ಒತ್ತಾಯ : ಪ್ರತಿಭಟನೆ

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸಬೇಕೆಂದು ಬೆಂಬಲಿಗರು ಒತ್ತಾಯಿಸಿ ಮನೆ ಮುಂದೆ ಪ್ರತಿಭಟಿಸಿದ್ದಾರೆ. ಕೋಲಾರ ನಮ್ಮೂರು ಸಿದ್ದರಾಮಯ್ಯ ನಮ್ಮೋರು ಎಂದು ಸಿದ್ದರಾಮಯ್ಯ ಅಭಿಮಾನಿಗಳು, ಬೆಂಬಲಿಗರು ಮನೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಿಂದಲೇ ಸ್ಫರ್ಧಿಸಬೇಕು ಇಲ್ಲದಿದ್ರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಅಭಿಮಾನಿಗಳು ಎಚ್ಚರಿಸಿದ್ದಾರೆ. ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕ್ಷೇತ್ರ ಆಯ್ಕೆ ಗೊಂದಲ ಮುಂದುವರಿದಿದೆ.ಕೋಲಾರ ಕ್ಷೇತ್ರದಲ್ಲೇ ಸಿದ್ದರಾಮಯ್ಯ ಸ್ಪರ್ಧಿಸಬೇಕು ಎಂದು ಅಭಿಮಾನಿ ಪಟ್ಟು ಹಿಡಿದಿದ್ದಾರೆ, ಕೋಲಾರದಿಂದ ಸ್ಪರ್ಧಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಶರ್ಟ್​ ಬಿಚ್ಚಿ ಬಾರುಕೋಲಿನಿಂದ ಅಭಿಮಾನಿ ಹೊಡೆದುಕೊಂಡು ತಮ್ಮ ಬೆಂಬಲ ಸೂಚಿಸಿದ್ದಾರೆ.ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಹೈಕಮಾಂಡ್ ಎಲ್ಲಿ ಸೂಚಿಸುತ್ತದೋ ಅಲ್ಲಿಂದ ಸ್ಪರ್ಧಿಸುತ್ತೇನೆ. ಹೈಕಮಾಂಡ್ ಬಳಿ ಕೇಳಿ ನಿಮಗೆ ತಿಳಿಸುತ್ತೇನೆ ಅಂತಾ ಅಭಿಮಾನಿಗಳಿಗೆ ಹೇಳಿದ್ದೇನೆ. ಕೋಲಾರದಿಂದ ನಾನು ಸ್ಪರ್ಧಿಸುವುದಿಲ್ಲ ಎಂದು ಎಲ್ಲಿಯೂ ಹೇಳಿಲ್ಲ ಎಂದು ತಿಳಿಸಿದರು.

ಅಂದಹಾಗೆ ರಾಹುಲ್ ಗಾಂಧಿಯವರು ಇಡೀ ರಾಜ್ಯಕ್ಕೆ ಸಂಬಂಧಿಸಿದ ನಾಯಕರು ನೀವು, ಇಡೀ ರಾಜ್ಯ ಸುತ್ತಾಡಿ, ಜನಾಭಿಪ್ರಾಯ ಹೇಗಿದೆ ಎಂದು ತಿಳಿದುಕೊಂಡು ಒಂದು ಕ್ಷೇತ್ರ ಆಯ್ಕೆ ಮಾಡಿಕೊಳ್ಳಿ ಎಂದಿದ್ದು ನನ್ನ ನಿರ್ಧಾರ ಶೀಘ್ರವಾಗಿ ಪ್ರಕಟಿಸುತ್ತೇನೆ ಎಂದರು.

Related Articles

- Advertisement -spot_img

Latest Articles