ಮೈಸೂರು : ಕಾಂಗ್ರೆಸ್‌ನ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗುತ್ತಿದ್ದು, ಅದರಲ್ಲಿ ನನ್ನ ಹೆಸರು ಇರುತ್ತಾ ಇಲ್ವಾ ಗೊತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
ಮಾಧ್ಯಮಗಳ ಜೊತೆ ಮಾತನಾಡಿ,ಕಾಂಗ್ರೆಸ್ ಪಟ್ಟಿ ಬಿಡುಗಡೆ ಆಗುತ್ತಿದ್ದು, ಅದರಲ್ಲಿ ವಿಧಾನಸಭಾ ಕ್ಷೇತ್ರಗಳ ಒಂದೇ ಹೆಸರಿರುವ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗುತ್ತದೆ ಎಂದು ಮಾಹಿತಿ ನೀಡಿದರು. ಐದು ವರ್ಷ ಮುಖ್ಯಮಂತ್ರಿ ಆಗಿದ್ದವರು, ಕ್ಷೇತ್ರ ಹುಡುಕುತ್ತಿದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ನಾನು ಕ್ಷೇತ್ರ ಹುಡುಕುತ್ತಿಲ್ಲ, ನನಗೆ ರಾಜ್ಯದ ಎಲ್ಲಾ ಕ್ಷೇತ್ರಗಳಿಂದಲೂ ಸ್ಪರ್ಧಿಸಲು ಡಿಮ್ಯಾಂಡ್ ಮಾಡ್ತಿದ್ದಾರೆ. ನನಗೆ ಅದೇ ಸಮಸ್ಯೆ , ನಾನು ಎಲ್ಲಿ ಸ್ಪರ್ಧೆ ಮಾಡಿದರೂ ಗೆಲ್ಲುತ್ತೇನೆ ಎಂದರು.
ನನ್ನ ಸ್ಪರ್ಧೆ ಹಾಗೂ ರಾಜಕೀಯ ವಿಚಾರಗಳನ್ನು ಯಾವುದನ್ನು ತಳ್ಳಿ ಹಾಕುವಂತಿಲ್ಲ. ವರುಣಾ ಸ್ಪರ್ಧೆ ಬಗ್ಗೆ ಅಂತೆ ಕಂತೆಗಳಿಗೆ ಉತ್ತರಿಸುವುದಿಲ್ಲ. ನನಗೆ ಬಾದಾಮಿ, ಕೋಲಾರ ಹಾಗೂ ವರುಣಾ ಕ್ಷೇತ್ರಗಳು ಇಷ್ಟ ಎಂದು ಹೇಳಿದರು.
ವರುಣಾ ಕ್ಷೇತ್ರದಿಂದ ಡಾ. ಯತೀಂದ್ರ ಹೆಸರು ಕ್ಲಿಯರ್ ಆಗಿದೆ, ನನ್ನ ಸ್ಫರ್ದೇ ವಿಚಾರವಾಗಿ ಮನೆಯವರ ಅಭಿಪ್ರಾಯವನ್ನೂ ಕೇಳುತ್ತಿದ್ದೇನೆ, ಅಂತಿಮವಾಗಿ ವರಿಷ್ಠರ ನಿರ್ಧಾರವೇ ನನ್ನ ನಿರ್ಧಾರ ಎಂದು ಸ್ಪಷ್ಟಪಡಿಸಿದರು.