ಬೆಂಗಳೂರು: ನಾನು ಈ ಬಾರಿಯ ಚುನಾವಣೆಗೆ ವರುಣಾದಿಂದಲೇ ಸ್ಪರ್ಧೆ ಮಾಡಲಿದ್ದೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿ, ಇದು ನನ್ನ ಕೊನೆಯ ಚುನಾವಣೆಯಾಗಿದೆ. ಅಲ್ಲದೇ ನಾನು ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ ಹೊರತು ರಾಜಕೀಯದಿಂದ ಅಲ್ಲ ಎಂದು ಹೇಳಿದರು. ಬಿಜೆಪಿ ಒಂದು ಮತೀಯ ಪಕ್ಷ, ನಮ್ಮದು ಜಾತ್ಯತೀತ ಪಕ್ಷ. ಕರ್ನಾಟಕದ ಜನರ ನಡುವೆ ಯಾವುದೇ ಭಿನ್ನಾಭಿಪ್ರಾಯ ಇರಬಾರದು.
ನಾನು ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಅಥವಾ ಯಾವುದೇ ಇತರ ಸಮುದಾಯ ಅಥವಾ ಧರ್ಮದವರಾಗಿದ್ದರೂ ಸಮಾನವಾಗಿ ಕಾಣುತ್ತೇನೆ, ಎಲ್ಲರನ್ನೂ ಸಮಾನವಾಗಿ ನೋಡುತ್ತೇನೆ ಎಂದರು. ನನ್ನ ಮತ್ತು ಡಿಕೆ ಶಿವಕುಮಾರ್ ಸಂಬಂಧ ಸೌಹಾರ್ದಯುತವಾಗಿದೆ. ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಪ್ರಜಾಪ್ರಭುತ್ವದಲ್ಲಿ ಸಹಜವಾಗಿಯೇ ಭಿನ್ನಾಭಿಪ್ರಾಯಗಳಿರುತ್ತವೆ ಆದರೆ ಅದು ಪಕ್ಷದ ಹಿತಾಸಕ್ತಿಗೆ ಹಾನಿಕರವಲ್ಲ ಎಂದರು.