Wednesday, March 22, 2023
spot_img
- Advertisement -spot_img

ಬಿಜೆಪಿ ಈ ದೇಶಕ್ಕೆ ಮಾರಕವಾಗಿದ್ದು, ಅದನ್ನ ಬೇರು ಸಮೇತ ಕಿತ್ತು ಹಾಕಬೇಕಿದೆ : ಮಾಜಿ ಸಿಎಂ ಸಿದ್ಧರಾಮಯ್ಯ

ಕೊಪ್ಪಳ: ಪ್ರಸ್ತುತ ರಾಜ್ಯದ ಪ್ರತಿ ಪ್ರಜೆಯ ಮೇಲೂ 86 ಸಾವಿರ ಸಾಲವಿದ್ದು, ರಾಜ್ಯವನ್ನು ಬಿಜೆಪಿ ದಿವಾಳಿ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮ ಸರ್ಕಾರದ ಅವಧಿಯಲ್ಲಿ ನಾವು ನುಡಿದಂತೆ ನಡೆದಿದ್ದೇವೆ. ನಾನು ಅಧಿಕಾರದಿಂದ ಇಳಿಯುವಾಗ ನಮ್ಮ ರಾಜ್ಯದ ಸಾಲ 2 ಲಕ್ಷದ 42 ಸಾವಿರ ಕೋಟಿ ಇತ್ತು. ಬಿಜೆಪಿ ಬಂದ ನಂತರ ಈ ಸಾಲದ ಪ್ರಮಾಣ ಎರಡು ಪಟ್ಟು ಹೆಚ್ಚಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ನಾನು ಮುಖ್ಯಮಂತ್ರಿಯಾಗಿದ್ದಾಗ ಕೊಪ್ಪಳಕ್ಕೆ ಸಾಕಷ್ಟು ಅನುದಾನ ನೀಡಿದ್ದೇನೆ. ಕೊಪ್ಪಳದ ಎಲ್ಲಾ ಕ್ಷೇತ್ರಗಳಿಗೂ 2 ರಿಂದ 3 ಸಾವಿರ ಕೋಟಿ ನೀಡಿದ್ದೇನೆ. ಕೊಪ್ಪಳ ಕಾಲೇಜು ಅಡಿಗಲ್ಲು ಮಾಡಿದ್ದು, ಅದನ್ನು ಉದ್ಘಾಟನೆ ಮಾಡಿದ್ದು ನಾನೆ. ನಾನು ಕೃಷಿಹೊಂಡ ಯೋಜನೆ ಭಾಗ್ಯ ನೀಡಿದ್ದೆ. ಇದರಡಿ 2 ಲಕ್ಷ ಕೃಷಿ ಹೊಂಡಗಳನ್ನು ತೊಡಿಸಿದ್ದೆ. ಆದರೆ ಈ ದರಿದ್ರ ಬಿಜೆಪಿ ಸರ್ಕಾರ ಆ ಯೋಜನೆ ನಿಲ್ಲಿಸಿದೆ ಎಂದು ವಾಗ್ದಾಳಿ ನಡೆಸಿದರು.

ದೇಶದಲ್ಲಿ ದ್ವೇಶದ ಸ್ಥಿತಿ ಹೆಚ್ಚಾಗಿದೆ. ಅದನ್ನ ಸರಿಪಡಿಸಲು‌ ನಮ್ಮ ರಾಹುಲ್ ಗಾಂಧಿ‌ ಭಾರತ್ ಜೋಡೋ ಯಾತ್ರೆ ಮಾಡುತ್ತಿದ್ದಾರೆ. ಬಿಜೆಪಿ ಈ ದೇಶಕ್ಕೆ ಮಾರಕವಾಗಿದ್ದು, ಅದನ್ನ ಬೇರು ಸಮೇತ ಕಿತ್ತು ಹಾಕಬೇಕಿದೆ. ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಕೂಡ ಅಷ್ಟೇ ಸತ್ಯ ಎಂದರು.

ಬಿಜೆಪಿಯವರು ಏನೇ ಆಟ ಆಡಿದರೂ ಕೊಪ್ಪಳ ಜಿಲ್ಲೆಯಲ್ಲಿ ಒಂದೇ ಒಂದು ಸ್ಥಾನ ಬಿಜೆಪಿಗೆ ಗೆಲ್ಲಲು ಸಾಧ್ಯವಿಲ್ಲ. ಮತ್ತೊಮ್ಮೆ ನಮ್ಮ ಎಲ್ಲಾ ಭರವಸೆ ಈಡೇರಿಸುತ್ತೇವೆ. ನಾವು ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ಕೊಡುತ್ತೇವೆ. ರಾಜ್ಯವನ್ನ ಹಸಿವು ಮುಕ್ತ ರಾಜ್ಯ ಮಾಡುವುದೇ ನಮ್ಮ ಉದ್ದೇಶವಾಗಿದೆ ಎಂದು ಹೇಳಿದರು.

Related Articles

- Advertisement -

Latest Articles