Tuesday, November 28, 2023
spot_img
- Advertisement -spot_img

ಬಿಜೆಪಿಗೆ ಭಯ ಆರಂಭವಾಗಿದೆ, ಹೀಗಾಗಿ ಪದೇ ಪದೇ ಮೋದಿ, ಶಾ ನಡ್ಡಾರನ್ನು ಕರೆಸುತ್ತಿದ್ದಾರೆ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಕಲಬುರಗಿ: ಬಿಜೆಪಿ ಪಕ್ಷಕ್ಕೆ ಭಯ ಶುರುವಾಗಿದೆ. ಹೀಗಾಗಿ ಪದೇ ಪದೇ ಮೋದಿ, ಶಾ ಅವರನ್ನು ಹಾಗೇ ನಡ್ಡಾರನ್ನು ಕರೆಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ ಕಾಂಗ್ರೆಸ್ ಮುಂದಿನ ಅಧಿಕಾರಕ್ಕೆ ಬಂದೇ ಬರುತ್ತದೆ, ಬಿಜೆಪಿಯವರಿಗೆ ನಡುಕ ಉಂಟಾಗಿದೆ, ಹೀಗಾಗಿ ಮೋದಿ, ಅಮಿತ್ ಷಾರನ್ನು ಪದೇ ಪದೇ ಕರೆಸಿಕೊಳ್ಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಮೈಸೂರು ಭಾಗದಲ್ಲಿ ಫೆ.3ರಂದು ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಪ್ರಜಾಧ್ವನಿ ಯಾತ್ರೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಯಾತ್ರೆಯಲ್ಲಿ ಜನರು ಸ್ವಯಂಪ್ರೇರಿತವಾಗಿ ಭಾಗಿಯಾಗುತ್ತಿದ್ದಾರೆ. ಹೋದ ಕಡೆಗಳಲ್ಲಿ ಯಾತ್ರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ನಾವೆಲ್ಲರೂ ಜಂಟಿಯಾಗಿ ಪಕ್ಷದ ಪ್ರಜಾಧ್ವನಿ ಯಾತ್ರೆ ನಡೆಸಿಕೊಂಡು ಹೋಗುತ್ತಿದ್ದೇವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದೇ ಆದರೆ, ಪ್ರತೀ ಲೀಟರ್‌ ಹಾಲಿಗೆ 1 ರೂಪಾಯಿ ಹೆಚ್ಚಿನ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ನಾವು ಅಧಿಕಾರಕ್ಕೆ ಬಂದಿದ್ದೇ ಆದರೆ, ಮಂಡ್ಯದಲ್ಲಿ ಹೈನೋದ್ಯಮ ಪ್ರೋತ್ಸಾಹಿಸಿ ರೈತರಿಗೆ ನೆರವಾಗುವ ದೃಷ್ಠಿಯಿಂದ ಈಗಿರುವ 5 ರೂಪಾಯಿ ಪ್ರೋತ್ಸಾಹದೊಂದಿಗೆ ಹೆಚ್ಚುವರಿ 1 ರೂಪಾಯಿ ಸೇರಿಸಿ 6 ರೂಪಾಯಿಗಳ ಪ್ರೋತ್ಸಾಹ ಧನ ನೀಡಲಾಗುವುದು. ಇದರಿಂದ ಹೈನುಗಾರರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಘೋಷಿದರು.

ಇನ್ನೂ ಕಾಂಗ್ರೆಸ್ ಭಾಗ್ಯಗಳು ಒಂದು ಚಡ್ಡಿ ಕೊಂಡುಕೊಂಡರೆ ಇನ್ನೊಂದು ಚಡ್ಡಿ ಉಚಿತ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ ಕುಮಾರಸ್ವಾಮಿ ಬಗ್ಗೆ ನಾನು ಮಾತನಾಡಲು ಆಗುವುದಿಲ್ಲ. ಕುಮಾರಸ್ವಾಮಿ ಬರೀ ಇಂತಹ ಸುಳ್ಳುಗಳನ್ನು ಹೇಳುತ್ತಾರೆ ಎಂದು ಅಭಿಪ್ರಾಯಪಟ್ಟರು.

Related Articles

- Advertisement -spot_img

Latest Articles