ಬೆಂಗಳೂರು: ಕೊರೊನಾ ಸಮಯದಲ್ಲಿ ಆರೋಗ್ಯ ಸಚಿವ ಸುಧಾಕರ್ ಮೂರು ಸಾವಿರ ಕೋಟಿ ಲಂಚ ಹೊಡೆದಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿ, ಸಿಎಂ ಬಸವರಾಜ ಬೊಮ್ಮಾಯಿ RSSನ ಕೈಗೊಂಬೆ. ಇವರಿಗೆ ಸುಳ್ಳು ಹೇಳೋದು ಬಿಟ್ಟರೆ ಬೇರೇನು ಗೊತ್ತಿಲ್ಲ. ಲಂಚ ಹೊಡೆಯುವ ಗಿರಾಕಿಗಳಿಗೆ ಸಿಎಜಿ ವರದಿ ಓದಲು ಎಲ್ಲಿ ಸಮಯ ಸಿಗುತ್ತೆ. ಸಿಎಜಿ ವರದಿಯನ್ನ ನಾನೂ ತರಿಸಿಕೊಂಡು ನೋಡಿದೆ. ಆಲಿಬಾಬ ಮತ್ತು ನಲವತ್ತು ಮಂದಿ ಕಳ್ಳರ ಗುಂಪಿನಲ್ಲಿ ಸುಧಾಕರ್ ಕೂಡ ಒಬ್ಬ ಸದಸ್ಯ ಎಂದು ವಾಗ್ದಾಳಿ ನಡೆಸಿದರು.
ಕೊರೊನಾ ಸಮಯದಲ್ಲಿ ಮೂರು ಸಾವಿರ ಕೋಟಿ ಲಂಚ ಹೊಡೆದಿದ್ದಾರೆ. ಚುನಾವಣೆಯಲ್ಲಿ ಬಿಜೆಪಿಗೆ ಸೋಲಿನ ಭಯ ಬಂದಿದೆ. ಹಾಗಾಗಿ ಮತ್ತೆ ಅಧಿಕಾರಕ್ಕೆ ಬರುವ ಹುನ್ನಾರ ನಡೆಸಿದ್ದಾರೆ ಎಂದು ಕಿಡಿಕಾರಿದ್ದಾರೆ.
ಒಬ್ಬೊಬ್ಬ ಮತದಾರರಿಗೂ 6 ಸಾವಿರ ರೂಪಾಯಿ ನೀಡುತ್ತೇವೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ ಎನ್ನಲಾದ ವಿಚಾರಕ್ಕೆ ಕಾಂಗ್ರೆಸ್ ನಾಯಕರು ಗರಂ ಆಗಿದ್ದು, ಹೈಗ್ರೌಂಡ್ ಪೊಲೀಸ್ ಠಾಣೆಗೆ ತೆರಳಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದ ನಿಯೋಗ ದೂರು ನೀಡಿದೆ.