ಬೆಂಗಳೂರು : 2023 ರ ಚುನಾವಣೆಯಲ್ಲಿ ಕಾಂಗ್ರೆಸ್ 130 ರಿಂದ 150 ಸ್ಥಾನಗಳನ್ನು ಗೆಲ್ಲುತ್ತದೆ. ನಮ್ಮ ಗೆಲುವನ್ನು ಮೋದಿ ಕೂಡ ತಡೆಯಲು ಸಾಧ್ಯವಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಬಾಗಲಕೋಟೆಯಲ್ಲಿ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ರಾಜ್ಯಕ್ಕೆ ಹಲವು ಬಾರಿ ಭೇಟಿ ನೀಡಿದರೂ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದನ್ನು ತಡೆಯುವುದು ಅಸಾಧ್ಯ ಎಂದರು.
ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ ನನ್ನನ್ನು ಅಲೆಮಾರಿ ಎನ್ನುತ್ತಾರೆ, ಆದರೆ ಎರಡು ಕ್ಷೇತ್ರಗಳಿಂದ ಸ್ಪರ್ಧಿಸಿದ್ದ ನರೇಂದ್ರ ಮೋದಿ ಬಿಜೆಪಿಗೆ ಜನಪ್ರಿಯ ನಾಯಕರಾಗಿದ್ದಾರೆ. ನಾನು ಜನಪ್ರಿಯ ನಾಯಕನಲ್ಲವೇ? ಎಂದು ಪ್ರಶ್ನಿಸಿದರು.ಬಿಜೆಪಿ ಜನರಿಗೆ ನೀಡಿದ ಆಶ್ವಾಸನೆಗಳನ್ನು ಈಡೇರಿಸಿಲ್ಲ. ಗಗನಕ್ಕೇರುತ್ತಿರುವ ಬೆಲೆಗಳನ್ನು ತಡೆಯಲು ಸಾಧ್ಯವಾಗಿಲ್ಲ ಎಂದು ತಿಳಿಸಿದರು.
ಆಕಾಂಕ್ಷಿಗಳಿಗೆ ಪಕ್ಷದ ಟಿಕೆಟ್ ಹಂಚಿಕೆ ಕುರಿತು ಪ್ರತಿಕ್ರಿಯಿಸಿ, ಫೆಬ್ರವರಿ 2 ರಂದು ಪಕ್ಷದ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಅಭ್ಯರ್ಥಿಗಳ ಅಂತಿಮ ಪಟ್ಟಿಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು. ಒಬ್ಬ ಅಭ್ಯರ್ಥಿ ಎಷ್ಟು ಕ್ಷೇತ್ರಗಳಲ್ಲಿ ಸ್ಪರ್ಧಿಸಬಹುದು ಎಂಬುದರ ಕುರಿತು ಪಕ್ಷದ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದರು.