Sunday, March 26, 2023
spot_img
- Advertisement -spot_img

ಪಕ್ಷದ ಗಮನ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯತ್ತ ಇರಬೇಕು : ಹಿರಿಯ ನಾಯಕ ಕೆ.ಹೆಚ್.ಮುನಿಯಪ್ಪ

ಬೆಂಗಳೂರು : ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂಬ ಪ್ರಚಾರ ನಿಲ್ಲಿಸಿ ಪಕ್ಷದ ಗೆಲುವಿನತ್ತ ಗಮನಹರಿಸಬೇಕಿದೆ ಎಂದು ಪಕ್ಷದ ಹಿರಿಯ ನಾಯಕ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ ಎಂಬ ವರದಿಗಳ ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ಇನ್ನೂ 10 ಮಂದಿ ಆಕಾಂಕ್ಷಿಗಳಿದ್ದಾರೆ. ಹೀಗಾಗಿ ಪಕ್ಷದ ಗಮನ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯತ್ತ ಇರಬೇಕು ಎಂದು ಹೇಳಿದ್ದಾರೆ. ಹಿರಿಯ ನಾಯಕರನ್ನು ನಾನು ಸ್ವಾಗತಿಸುತ್ತೇನೆ. ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕಾಂಗ್ರೆಸ್ ಬಲಗೊಳ್ಳಬೇಕೆಂಬುದಷ್ಟೇ ನನ್ನ ಏಕೈಕ ಕಾಳಜಿಯಾಗಿದೆ ಎಂದಿದ್ದಾರೆ. ಕೆಲ ಮುಖಂಡರು ಗ್ರಾಮ, ಹೋಬಳಿ ಮಟ್ಟದಲ್ಲಿ ಸಭೆ ನಡೆಸಿ ಗುಂಪುಗಾರಿಕೆ ಮಾಡುತ್ತಿದ್ದು, ಇದನ್ನೂ ಕೂಡಲೇ ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.

ನಾನು ಬಾಯಿಬಿಟ್ಟರೆ ಕಾಂಗ್ರೆಸ್ನಲ್ಲಿ ಬಿರುಕು ಮೂಡುತ್ತದೆ. ಎಲ್ಲರೂ ಒಗ್ಗೂಡಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಎಲ್ಲಾ 11 ವಿಧಾನಸಭಾ ಕ್ಷೇತ್ರಗಳು ಕಾಂಗ್ರೆಸ್ ಪರವಾಗಿ ಮತ ಚಲಾಯಿಸುವಂತೆ ನೋಡಿಕೊಳ್ಳಬೇಕು ಎಂದರು.ಲೋಕಸಭಾ ಸೋಲು ಕುರಿತು ರಾಜ್ಯ ಕಾಂಗ್ರೆಸ್ ನಾಯಕರಾಗಲಿ ಅಥವಾ ಪಕ್ಷದ ಹೈಕಮಾಂಡ್ ಆಗಲಿ ಯಾವುದೇ ಕ್ರಮ ಕೈಗೊಳ್ಳದೇ ಇರುವುದು, ಗಮನ ಹರಿಸದಿರುವುದು ಬಹಳ ನೋವಿನ ಸಂಗತಿಯಾಗಿದೆ ಎಂದು ತಿಳಿಸಿದ್ದಾರೆ.

Related Articles

- Advertisement -

Latest Articles