ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇನ್ನೂ ಪ್ರಮಾಣವಚನ ಸ್ವೀಕಾರದ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಗಣ್ಯರು ಆಗಮಿಸುತ್ತಿದ್ದಾರೆ.
ಬೆಂಗಳೂರಿನ ರೋಡ್ ಲ್ಲಿ ಗಾಂಧಿ ಕುಟುಂಬ, ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇರುವ ಪೋಸ್ಟರ್‌ಗಳು ಎಲ್ಲೆಡೆ ರಾರಾಜಿಸ್ತಿವೆ,ಕಾಂಗ್ರೆಸ್ ಹಿರಿಯ ನಾಯಕ ಸಿದ್ಧರಾಮಯ್ಯ ಶನಿವಾರ ಮಧ್ಯಾಹ್ನ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಕಾಂಗ್ರೆಸ್‌ನ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ, ಪಕ್ಷದ ಹಾಲಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಇತರ ನಾಯಕರ ಪೋಸ್ಟರ್‌ಗಳು ಸಹ ಕಂಡುಬಂದಿದ್ದು ಗಮನ ಸೆಳೆದಿವೆ.
ಈಗಾಗಲೇ ಸಮಾರಂಭಕ್ಕೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಆಗಮಿಸಿದ್ದು, ಡಿಕೆಶಿ ಸ್ವಾಗತಿಸಿದ್ದಾರೆ. ಅಷ್ಟೇ ಅಲ್ಲದೇ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಶ್ರೀ ರಾಹುಲ್ ಗಾಂಧಿ ಶ್ರೀಮತಿ ಪ್ರಿಯಾಂಕಾ ಗಾಂಧಿ ವಾದ್ರಾ ರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಸ್ವಾಗತಿಸಿ, ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬರಮಾಡಿಕೊಳ್ಳಲಾಯಿತು.
ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಾವಿರಾರು ಜನರು ಕಂಠೀರವ ಸ್ಟೇಡಿಯಂನತ್ತ ಧಾವಿಸುತ್ತಿದ್ದು, ಸ್ಥಳದಲ್ಲಿ ನೂಕುನುಗ್ಗಲು ಏರ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ಜನರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ ಎಂದು ಹೇಳಲಾಗ್ತಿದೆ.