ಬೆಂಗಳೂರು : ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಬಿಟ್ ಕಾಯಿನ್ ಹಗರಣದ ತನಿಖೆಯನ್ನು ವಿಶೇಷ ತನಿಖಾ ದಳ (ಎಸ್ಐಟಿ) ಚುರುಕುಗೊಳಿಸಿದ್ದು, ಪ್ರಕರಣದ ಪ್ರಮುಖ ಮೂವರು ಆರೋಪಿಗಳ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದುಕೊಂಡ ಎಸ್ಐಟಿ ಅಧಿಕಾರಿಗಳು, ಇಂದು (ಸೆ. 12) ಬೆಳಿಗ್ಗೆ ಆರೋಪಿಗಳಾದ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ, ಸುನೀಶ್ ಹೆಗ್ಡೆ ಮತ್ತು ಪ್ರಸಿದ್ದ್ ಮನೆ ಮೇಲೆ ದಾಳಿ ಮಾಡಿದ್ದಾರೆ. ಸಂಜಯ್ ನಗರದಲ್ಲಿರುವ ಸುನೀಶ್ ಹೆಗ್ಡೆ, ಪ್ರಸಿದ್ದ್ ಹಾಗೂ ಜಯನಗರದಲ್ಲಿರುವ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಮನೆಯಲ್ಲಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಆರ್.ಅಶೋಕ್‌ಗೆ ಸಂಕಷ್ಟ ತಂದಿಟ್ಟ ‘ಡಿ.ಕೆ. ಸಹೋದರರು’!
ಬಿಜೆಪಿ ಸರ್ಕಾರದ ಅವಧಿಯಲ್ಲಿ ಭಾರೀ ಸದ್ದು ಮಾಡಿದ್ದ ಬಿಟ್ ಕಾಯಿನ್ ಹಗರಣದ ತನಿಖೆಯನ್ನು ಅರಂಭದಲ್ಲಿ ಸಿಐಡಿಗೆ ವಹಿಸಲಾಗಿತ್ತು. ಸಿಐಡಿ ಈಗಾಗಲೇ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಚಾರ್ಚ್ ಶೀಟ್ ಸಲ್ಲಿಸಿದೆ. ಈ ನಡುವೆ ಅಧಿಕಾರಕ್ಕೆ ಬಂದ ನೂತನ ಕಾಂಗ್ರೆಸ್ ಸರ್ಕಾರ ಪ್ರಕರಣದ ಮರು ತನಿಖೆಗೆ ಹಿರಿಯ ಐಪಿಎಸ್ ಅಧಿಕಾರಿ ಮನೀಷ್ ಕರ್ಬಿಕರ್ ನೇತೃತ್ವದಲ್ಲಿ ಎಸ್ಐಟಿ ರಚನೆ ಮಾಡಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.