ನವದೆಹಲಿ: ಜಿ-20 ಶೃಂಗಸಭೆ ಹಿನ್ನೆಲೆ ಇಂದು ಆಯೋಜನೆಗೊಂಡಿರುವ ಔತಣಕೂಟವು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅಧ್ಯಕ್ಷತೆಯಲ್ಲಿ ಆಯೋಜಿಸುವ ಔತಣಕೂಟದಲ್ಲಿ ಸುಮಾರು 6 ರಾಜ್ಯದ ಸಿಎಂಗಳು ಹಾಗೂ ಇಬ್ಬರು ಮಾಜಿ ಪ್ರಧಾನಿಗಳು ದೂರ ಉಳಿಯಲಿದ್ದಾರೆ ಎಂದು ವರದಿಯಾಗಿದೆ.
ಆರೋಗ್ಯ ಸರಿಯಿಲ್ಲದ ಕಾರಣ ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಹೆಚ್.ಡಿ ದೇವೇಗೌಡರು ಔತಣಕೂಟದಲ್ಲಿ ಭಾಗವಹಿಸುತ್ತಿಲ್ಲ ಎಂದು ತಿಳಿದುಬಂದಿದೆ. ಅಲ್ಲದೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಆಹ್ವಾನ ನೀಡದ ಹಿನ್ನೆಲೆ ಭಾರೀ ಟೀಕೆ ಕೇಳಿಬಂದಿದೆ.
ಇದನ್ನೂ ಓದಿ: Chandrababu Naidu Arrested : ಚಂದ್ರಬಾಬು ನಾಯ್ಡು ಅರೆಸ್ಟ್ : ಏನಿದು ₹ 371 ಕೋಟಿ ಹಗರಣ ಕೇಸ್?
ಸಿಎಂ ಸಿದ್ದರಾಮಯ್ಯ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಮತ್ತು ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್ ಕೂಡ ಕಾರ್ಯಕ್ರಮಕ್ಕೆದಿಂದ ದೂರ ಉಳಿಯಲಿದ್ದಾರೆ. ಗೆಹ್ಲೋಟ್ ಕಾಲು ಬೆರಳುಗಳ ಮುರಿತ ಹಿನ್ನೆಲೆ ಔತಣಕೂಟಕ್ಕೆ ಭೇಟಿ ನೀಡುತ್ತಿಲ್ಲ ಎಂದು ತಿಳಿಸಿದ್ದಾರೆ. ಒಡಿಶಾ ಸಿಎಂ ನವೀನ್ ಪಟ್ನಾಯಕ್ ಕೂಡ ಕಾರ್ಯಕ್ರಮದಿಂದ ಹೊರಗುಳಿಯುವುದನ್ನು ಖಚಿತಪಡಿಸಿದ್ದಾರೆ.
ಇನ್ನು ತೆಲಂಗಾಣ ಸಿಎಂ ಕೆ ಚಂದ್ರಶೇಖರ್ ರಾವ್ ಅವರು ಹಾಜರಾಗುವ ಸಾಧ್ಯತೆಯ ಬಗ್ಗೆ ಯಾವುದೇ ವರದಿಯಾಗಿಲ್ಲ. ಬಹುಪಾಲು ಅವರು ಔತಣಕೂಟದಿಂದ ದೂರ ಉಳಿಯಲಿದ್ದಾರೆ. ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಸೆಪ್ಟೆಂಬರ್ 12 ರಂದು ಲಂಡನ್‌ನಿಂದ ಹಿಂತಿರುಗಲಿದ್ದಾರೆ. ಜೊತೆಗೆ ಪಿಣರಾಯಿ ವಿಜಯನ್ ಸಹ ಔತಣಕೂಟಕ್ಕೆ ತೆರಳುವ ಬಗ್ಗೆ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ.
ಇದನ್ನೂ ಓದಿ: ಅತಿಥಿಗಳಿಂದ ಭಾರತದ ವಾಸ್ತವ ಮರೆಮಾಚುವ ಅಗತ್ಯವಿಲ್ಲ: G20ಗೆ ರಾಹುಲ್ ಟಾಂಗ್
ಪ್ರಸ್ತುತ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಪಂಜಾಬ್‌ನ ಭಗವಂತ್ ಮಾನ್, ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್, ಬಿಹಾರ ಸಿಎಂ ನಿತೀಶ್ ಕುಮಾರ್, ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮತ್ತು ಹಿಮಾಚಲ ಪ್ರದೇಶದ ಸಿಎಂ ಸುಖವಿಂದರ್ ಸಿಂಗ್ ಸುಖು ಔತಣಕೂಟದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.