ಬೆಂಗಳೂರು : ನಾನು ಸಕ್ರಿಯ ರಾಜಕಾರಣದಿಂದ ದೂರ ಸರಿಯುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿ, ವಯಸ್ಸಿಗೆ ಬೆಲೆ ಕೊಟ್ಟು ಸಾರ್ವಜನಿಕ ಜೀವನದಿಂದ ಹಿಂದೆ ಸರಿಯುತ್ತಿದ್ದೇನೆ ,90ರಲ್ಲಿ 50ರ ತರಹ ನಟನೆ ಮಾಡಲು ಆಗಲ್ಲಎಂದು ರಾಜಕೀಯ ನಿವೃತ್ತಿಯ ಬಗ್ಗೆ ಸ್ಪಷ್ಟನೆ ನೀಡಿದರು. ನಾನೇ ರಿಟೈರ್ ಆಗುವಾಗ ಪಕ್ಷ ನನ್ನ ಕಡೆಗಣಿಸಲಾಗಿದೆ ಎಂಬ ಪ್ರಶ್ನೆ ಬರುವುದಿಲ್ಲ.
ರಾಜಕೀಯವಾಗಿ ನಿವೃತ್ತಿ ಬಗ್ಗೆ ಹೈಕಮಾಂಡ್ ನಾಯಕ ಗಮನಕ್ಕೆ ತಂದಿಲ್ಲ. ಅವರ ಗಮನಕ್ಕೆ ತಂದರೆ ನನಗೇನು ಅವರು ಫೆನ್ಶನ್ ಕೊಡುವುದಿಲ್ಲ. ಹೀಗಾಗಿ ಅವರ ಗಮನಕ್ಕೆ ತಂದಿಲ್ಲ. ನಾನೇ ಸ್ವಯಂ ಪ್ರೇರಿತರಾಗಿ ರಿಟೈರ್ ಆಗುತ್ತಿರುವಾಗ ಇದರ ಬಗ್ಗೆ ಹೇಳಬೇಕಿಲ್ಲಎಂದರು.
ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಸಂಪೂರ್ಣವಾಗಿ ರಾಜಕೀಯದಿಂದ ನಿವೃತ್ತಿಯಾಗುತ್ತಿಲ್ಲ. “ನಾನು ಸಂಪೂರ್ಣವಾಗಿ ಸನ್ಯಾಸಿಯಾಗುತ್ತೇನೆ ಎಂದಲ್ಲ. ಪಕ್ಷ ಇಲ್ಲವೇ ನಾಯಕರು ಸಲಹೆ ಕೇಳಿದರೆ ಕೊಡುತ್ತೇನೆ” ಎಂದು ಸ್ಪಷ್ಟಪಡಿಸಿದ್ದಾರೆ.