ತುಮಕೂರು: ಟಿಕೆಟ್ ಸಿಗದ್ದಕ್ಕೆ ಮಾಜಿ ಸಚಿವ ಸೊಗಡು ಶಿವಣ್ಣ ಇ-ಮೇಲ್ ಮೂಲಕ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಗೆ ರಾಜೀನಾಮೆ ಸಲ್ಲಿಸಿದ್ದೇನೆ. ಇ-ಮೇಲ್ ಮೂಲಕ ರಾಜೀನಾಮೆ ನೀಡಿದ್ದು, ಬಿಜೆಪಿಯ ಎಲ್ಲಾ ಸಾಮಗ್ರಿಗಳನ್ನು ನನ್ನ ಮನೆ ಹಾಗೂ ಕಚೇರಿಯ ಹೊರಗೆ ಎಸೆಯುತ್ತೇನೆ ಎಂದಿದ್ದಾರೆ.
ತುಮಕೂರು ನಗರ ಕ್ಷೇತ್ರದಿಂದ ನಾನು ಚುನಾವಣೆಗೆ ಸ್ಪರ್ಧಿಸುವುದು ಖಚಿತ. ನಮ್ಮ ಕಾರ್ಯಕರ್ತರ ಜೊತೆ ಸಭೆ ನಡೆಸಿ ತೀರ್ಮಾನ ಮಾಡುತ್ತೇನೆ. ಪಕ್ಷೇತರ ಅಥವಾ ಬೇರೆ ಪಕ್ಷದಿಂದ ಸ್ಪರ್ಧಿಸಬೇಕಾ ಎಂಬ ಬಗ್ಗೆ ಚರ್ಚೆ ಮಾಡುತ್ತೇನೆ. ನಾನು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ ಎಂದು ಹೇಳಿದ್ದಾರೆ. ಪಕ್ಷ ನನ್ನನ್ನು ಕಾಪಾಡುತ್ತದೆ ಎಂದುಕೊಂಡಿದ್ದೆ ಆದರೆ ನನಗೆ ನಂಬಿಕೆ ದ್ರೋಹ ಮಾಡಿದೆ ಎಂದು ತಿಳಿಸಿದರು.