ಬೆಂಗಳೂರು: ನಗರದ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಡೆಸಿದ್ದ ಬೃಹತ್ ಪ್ರತಿಭಟನೆ ಅಂತ್ಯಗೊಂಡಿದೆ. ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಡಿದೆದ್ದರು. ಆದರೆ ಈ ಪ್ರತಿಭಟನೆಯಲ್ಲಿ ಬಿಜೆಪಿ ಅಸಮಾಧಾನಿತರು ಗೈರಾಗಿದ್ದು ಭಾರೀ ಕುತೂಹಲ ಮೂಡಿಸಿದೆ.
ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್, ಸತೀಶ್ ರೆಡ್ಡಿ, ಸುರೇಶ್ ಕುಮಾರ್, ಮಾಜಿ ಶಾಸಕ ವಿ.ಸೋಮಣ್ಣ ಪ್ರತಿಭಟನೆಯಿಂದ ದೂರ ಉಳಿದಿದ್ದರು. ಇತ್ತೀಚಿಗೆ ಪಕ್ಷದ ಚಟುವಟಿಕೆಯಿಂದ ದೂರು ಉಳಿದಿರುವ ಸೋಮಣ್ಣ ಹಾಗೂ ಎಸ್.ಟಿ ಸೋಮಶೇಖರ್ ಪ್ರತಿಭಟನೆಯಿಂದಲೂ ಅಂತರ ಕಾಯ್ದುಕೊಂಡಿದ್ದಾರೆ.
ಇದನ್ನೂ ಓದಿ: ಪಕ್ಷ ಕಟ್ಟಲು ಕುಮಾರಸ್ವಾಮಿ ದೃಢ ಸಂಕಲ್ಪ; ಬೃಹತ್ ಸಭೆ ಕರೆದ ಜೆಡಿಎಸ್!
ಈ ಮೊದಲು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಕರೆದಿದ್ದ ಸಭೆಗೂ ನಾಯಕರು ಗೈರಾಗಿದ್ದರು. ಇದೀಗ ಕಾಂಗ್ರೆಸ್ ವಿರುದ್ಧದ ಪ್ರತಿಭಟನೆಯಿಂದ ದೂರು ಉಳಿದಿರುವುದು ಅವರಲ್ಲಿ ಅಸಮಾಧಾನ ಮುಂದುವರೆದಿದೆ ಅಂತಲೇ ವಿಶ್ಲೇಷಿಸಲಾಗುತ್ತಿದೆ.
ಇದನ್ನೂ ಓದಿ: ಸನಾತನ ಧರ್ಮದ ಚರ್ಚೆಯೇ ಒಂಥರ ಕ್ಯಾನ್ಸರ್ ಇದ್ದ ಹಾಗೆ : ರುದ್ರಪ್ಪ ಲಂಬಾಣಿ
ಈ ಮೊದಲು ಎಸ್.ಟಿ ಸೋಮಶೇಖರ್, ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಜೊತೆ ವೇದಿಕೆ ಹಂಚಿಕೊಂಡಿದ್ದರು. ಬಳಿಕ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ಈ ಭೇಟಿಗಳು ರಾಜಕೀಯ ವಲಯದಲ್ಲಿ ‘ಘರ್ ವಾಪ್ಸಿ’ ಕುರಿತ ಚರ್ಚೆಗೆ ಕಾರಣವಾಗಿತ್ತು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.