ಬೆಂಗಳೂರು: ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಬಂದ್ ಮಾಡಿಸುತ್ತಿದ್ದಾರೆ. ಅಂತವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಖಾಸಗಿ ಒಕ್ಕೂಟಗಳು ಇಂದು ಬೆಂಗಳೂರು ಬಂದ್‌ಗೆ ಕರೆಕೊಟ್ಟಿರುವ ಹಿನ್ನೆಲೆ ಮಾತನಾಡಿದ ಅವರು, ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ನಾನು ಕೂಡ ಸಚಿವರಿಗೆ ವಿನಂತಿ ಮಾಡುತ್ತೇನೆ ಎಂದಿದ್ದಾರೆ.
ಸಿಎಂ ಕುರಿತು ಬಿ.ಕೆ ಹರಿಪ್ರಸಾದ್ ಅಸಮಾಧಾನ ಹಿನ್ನೆಲೆ ಪ್ರತಿಕ್ರಿಯಿಸಿದ ಅವರು, ಅವು ಹಿರಿಯ ರಾಜಕಾರಣಿಗಳಿದ್ದಾರೆ. ಬಹಳಷ್ಷು ರಾಜಕೀಯ ಅನುಭವವಿದೆ. ಸಂಸದರಾಗಿದ್ರು, ಪಕ್ಷದ ಅನೇಕ ಜವಾಬ್ದಾರಿ ನಿರ್ವಹಿಸಿದ್ದಾರೆ. ಈ ರೀತಿ ಬಹಿರಂಗ ಹೇಳಿಕೆ ನೀಡೋದು ಸರಿಯಲ್ಲ. ಬೇಕಾದ್ರೆ ಎಐಸಿಸಿ ಅಧ್ಯಕ್ಷರ ಜೊತೆ, ಸೋನಿಯಾಗಾಂಧಿ ಜೊತೆ ಚರ್ಚೆ ಮಾಡಲಿ ಎಂದಿದ್ದಾರೆ.
ಇದನ್ನೂ ಓದಿ: ನೆದರ್ ಲ್ಯಾಂಡ್ ಪ್ರಧಾನಿ ಸ್ವಾಗತಿಸಿದ ಡಿಕೆ ಶಿವಕುಮಾರ್
ಹರಿಪ್ರಸಾದ್ ಹೇಳಿದ್ದೇನು?
‘ನಾನು ಮಂತ್ರಿಯಾಗಿದ್ದರೆ ನಿಮ್ಮನ್ನೆಲ್ಲ ಭೇಟಿಯಾಗೋಕೆ ಆಗ್ತಿರಲಿಲ್ಲ. ನನ್ನನ್ನು ಮಂತ್ರಿ ಮಾಡದ್ದಕ್ಕೆ ರಾಜ್ಯದ ಮುಖ್ಯಮಂತ್ರಿಗಳಿಗೆ ಧನ್ಯವಾದ’ ಎಂದು ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಸಿಎಂ ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದರು.
ಇದನ್ನೂ ಓದಿ: ‘ಅಸಾಧ್ಯವಾದ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ, ಖಾಸಗಿ ಬಸ್ಗಳ ನಷ್ಟ ತುಂಬಿಕೊಡಲು ಆಗಲ್ಲ’
ದೇವರಾಜ ಅರಸು ಅವರ ಜನ್ಮ ದಿನದಂದು ಸಿಎಂ ಸಿದ್ದರಾಮಯ್ಯ ಅರಸು ಅವರ ಹಳೆಯ ಕಾರಿನಲ್ಲಿ ಸುತ್ತಾಡಿದ್ದರು. ಈ ವಿಚಾರವನ್ನು ಪ್ರಸ್ತಾಪಿಸಿ ಟಾಂಗ್ ನೀಡಿದ ಹರಿಪ್ರಸಾದ್, ಅರಸು ಅವರ ಕಾರಿನಲ್ಲಿ ಕುಳಿತ ತಕ್ಷಣ ಯಾರೂ ಅವರ ಹಾಗೆ ಆಗಲ್ಲ. ಅರಸು ಅವರ ಚಿಂತನೆ ನಮ್ಮಲ್ಲಿ ಬರಬೇಕು. ಇವರ ಕೈಯಲ್ಲಿ ಅರಸು ಅವರ ಮೊಮ್ಮಗನನ್ನು ಎಂಎಲ್ ಸಿ ಮಾಡೋಕೆ ಆಗಿಲ್ಲ ಎಂದಿದ್ದರು.
ಇಂದಿರಾ ಗಾಂಧಿ, ಸೋನಿಯಾ ಗಾಂಧಿ, ರಾಜೀವ್ ಗಾಂಧಿ, ರಾಹುಲ್ ಗಾಂಧಿ, ಹೀಗೆ ಎಲ್ಲಾ ಗಾಂಧಿಗಳ ಜೊತೆ ನಾನು ಕೆಲಸ ಮಾಡಿದ್ದೇನೆ. ಆದರೆ, ಅಧಿಕಾರಕ್ಕಾಗಿ ಯಾರ ಬಳಿಯೂ ಹೋಗಿಲ್ಲ ಎಂದಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.