ದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸೌಮ್ಯ ಜ್ವರ ಕಾಣಿಸಿಕೊಂಡ ಕಾರಣ ನಗರದ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸುದ್ದಿ ಸಂಸ್ಥೆ ಎಎನ್ ಐ ಪ್ರಕಾರ, ಅವರು ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ ಮತ್ತು ಪ್ರಸ್ತುತ ಅವರ ಆರೋಗ್ಯ ಸ್ಥಿರರಾಗಿದ್ದಾರೆ.
ಇದಕ್ಕೂ ಮುನ್ನ ಸೋನಿಯಾ ಗಾಂಧಿ 2023ರಲ್ಲಿ ಅಂದರೆ ಇದೆ ವರ್ಷ ಎರಡು ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು.
ವೈರಲ್ ಉಸಿರಾಟದ ಸೋಂಕಿನ ಚಿಕಿತ್ಸೆಗಾಗಿ ಆರು ಜನವರಿ 12, 2023 ರಂದು ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ನಂತರ ಜನವರಿ 17, 2023 ರಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.
ಇದನ್ನೂ ಓದಿ : ಜಿ20 ಶೃಂಗಸಭೆ: ದೆಹಲಿಯಲ್ಲಿ 130000 ಸಿಬ್ಬಂದಿ, ಬುಲೆಟ್ ಪ್ರೂಫ್ ಕಾರು, ಡ್ರೋನ್; ಹೇಗಿದೆ ನೋಡಿ ಬಿಗಿಭದ್ರತೆ!
2023 ರ ಮಾರ್ಚ್ 2 ರಂದು ಜ್ವರದ ಕಾರಣ ಸೋನಿಯಾ ಗಾಂಧಿ ಮತ್ತೆ ಅದೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು.
ಸೋನಿಯಾ ಗಾಂಧಿ ಇತ್ತೀಚೆಗೆ ಆಗಸ್ಟ್ 31 ರಂದು ಮುಂಬೈನಲ್ಲಿ ನಡೆದ ವಿರೋಧ ಪಕ್ಷದ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸಿದ್ದರು. ಅವರು ತಮ್ಮ ಮಗ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರೊಂದಿಗೆ ಅಲ್ಲಿಗೆ ಬಂದಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.