ಬೆಂಗಳೂರು: ಹಾಲಿ ಜಯನಗರ ವಿಧಾಸಭೆ ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿ ಕಾರನ್ನು ಸೀಜ್ ಮಾಡಲಾಗಿದೆ. ಶಾಸಕಿ ಸೌಮ್ಯ ರೆಡ್ಡಿಗೆ ಸೇರಿದ ಇನ್ನೋವಾ ಕಾರನ್ನು ತಿಲಕ ನಗರ ಪೊಲೀಸರು ಸೀಜ್ ಮಾಡಿದ್ದಾರೆ.23 ಸೀರೆ , 32 ಬ್ಲೌಸ್ ಪೀಸ್, ಸಾಮ್ ಸಂಗ್, ನೋಕಿಯಾ ಆಂಡ್ರೈಡ್ ಮೊಬೈಲ್ , 16 ಶಾಲು ಸಿಕ್ಕಿರುವ ಬಗ್ಗೆ ಮಾಹಿತಿ ಲಭಿಸಿದೆ.
ಮತದಾರರಿಗೆ ಸೀರೆ ಹಂಚಲು ತೆರಳುತ್ತಿದ್ದ ವೇಳೆ ಚುನಾವಣಾಧಿಕಾರಿಗಳು ಕಾರನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕಿಯಾಗಿರುವ ಸೌಮ್ಯ ರೆಡ್ಡಿ ಕಾರಿನಲ್ಲಿ, ಸೀರೆಗಳು ಪತ್ತೆಯಾಗಿದ್ದು, ಕೂಡಲೇ ಕಾರನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ಕೂಡ ದಾಖಲಿಸಿದ್ದಾರೆ.
ಏಪ್ರಿಲ್ 13 ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಆಯಾ ಜಿಲ್ಲಾ ಚುನಾವಣಾಧಿಕಾರಿಗಳು ಚುನಾವಣಾ ಅಧಿಸೂಚನೆ ಪ್ರಕಟಿಸಲಿದ್ದಾರೆ. ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ರಾಜ್ಯದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.