ನವದೆಹಲಿ: ಕೇಂದ್ರ ಸರ್ಕಾರವು ಸೆಪ್ಟೆಂಬರ್ 18 ರಿಂದ 22 ರವರೆಗೆ ವಿಶೇಷ ಸಂಸತ್ತ ಅಧಿವೇಶನವನ್ನು ನಡೆಸಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಗುರುವಾರ ತಿಳಿಸಿದ್ದಾರೆ.
ಈ ಬಗ್ಗೆ ಎಕ್ಸ್ (ಹಿಂದಿನ ಟ್ವಿಟರ್) ನಲ್ಲಿ ಬರೆದುಕೊಂಡಿರುವ ಕೇಂದ್ರ ಸಚಿವ ಜೋಶಿ, ಸಂಸತ್ತಿನ ವಿಶೇಷ ಅಧಿವೇಶನವನ್ನು (17ನೇ ಲೋಕಸಭೆಯ 13ನೇ ಅಧಿವೇಶನ ಮತ್ತು ರಾಜ್ಯಸಭೆಯ 261ನೇ ಅಧಿವೇಶನ) ಸೆಪ್ಟೆಂಬರ್ 18ರಿಂದ 22ರವರೆಗೆ 5 ಅಧಿವೇಶನಗಳನ್ನು ಕರೆಯಲಾಗುತ್ತಿದೆ. ಸಂಸತ್ತಿನಲ್ಲಿ ಫಲಪ್ರದ ಚರ್ಚೆಗಳನ್ನು ನಡೆಸಲು ಅಮೃತ್ ಕಾಲ್ ಎದುರು ನೋಡುತ್ತಿದ್ದಾರೆ” ಎಂದು ಬರೆದುಕೊಂಡಿದ್ದಾರೆ.
ಆದರೆ, ಅಧಿವೇಶನ ಏಕೆ ಕರೆಯಲಾಗಿದೆ ಎಂಬ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.