ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸಂಸತ್ತಿನ ವಿಶೇಷ ಅಧಿವೇಶನ ಕರೆಯುವ ಮೂಲಕ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.
ಈ ವಿಶೇಷ ಅಧಿವೇಶನ ಕರೆದಿರುವ ಹಿಂದಿನ ಉದ್ದೇಶದ ಬಗ್ಗೆ ಕೇಂದ್ರ ಇದುವರೆಗೆ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. ಆದರೆ, ಈ ಅಧಿವೇಶನದಲ್ಲಿ ಒಂದು ರಾಷ್ಟ್ರ – ಒಂದು ಚುನಾವಣೆ, ಮಹಿಳಾ ಮೀಸಲಾತಿ ಮಸೂದೆ ಸೇರಿದಂತೆ ಕೆಲವು ಮಹತ್ವದ ಮಸೂದೆಗಳನ್ನು ಮಂಡಿಸುವ ಸಾಧ್ಯತೆ ಇದೆ.
ಇದನ್ನೂ ಓದಿ : ರಾಜ್ಯ ರಾಜಕೀಯದ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ!
ವಿಶೇಷ ಅಧಿವೇಶನದಲ್ಲಿ, ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ, ಏಕರೂಪ ನಾಗರಿಕ ಸಂಹಿತೆ ಪರಿಚಯಿಸುವ ಮಸೂದೆ ಮತ್ತು ಮಹಿಳಾ ಮೀಸಲಾತಿ ಮಸೂದೆ ಸಹ ಚರ್ಚೆಗೆ ಬರಲಿವೆ ಎನ್ನಲಾಗುತ್ತಿದೆ.
ಮಹಿಳಾ ಮೀಸಲಾತಿ ಮಸೂದೆಯು ಬಹಳ ಸಮಯದಿಂದ ಐಸ್-ಬಾಕ್ಸ್ನಲ್ಲಿದೆ, ಆದರೆ UCC ಯಷ್ಟು ದೀರ್ಘವಾಗಿಲ್ಲ. 2008 ರಲ್ಲಿ, ಮನಮೋಹನ್ ಸಿಂಗ್ ನೇತೃತ್ವದ ಯುನೈಟೆಡ್ ಪ್ರೋಗ್ರೆಸ್ಸಿವ್ ಅಲೈಯನ್ಸ್ ಸರ್ಕಾರವು ರಾಜ್ಯಸಭೆಯಲ್ಲಿ ಮಸೂದೆಯನ್ನು ಮಂಡಿಸಿತು ಮತ್ತು ಮಾರ್ಚ್ 9, 2010 ರಂದು ಅದನ್ನು 186-1 ಮತಗಳಿಂದ ಅಂಗೀಕರಿಸಲಾಯಿತು.
ಯುಸಿಸಿಯು ಬಿಜೆಪಿಯ ಅತ್ಯಂತ ಹಳೆಯ ಚುನಾವಣಾ ಭರವಸೆಗಳಲ್ಲಿ ಒಂದಾಗಿದೆ ಮತ್ತು ಇದು ದೀರ್ಘಕಾಲದಿಂದ ಬಾಕಿ ಉಳಿದಿದೆ. 2024 ರ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ ರಾಜಕೀಯ ಬೆಂಬಲವನ್ನು ಕ್ರೋಢೀಕರಿಸಲು ಪ್ರಧಾನಿ ಮೋದಿ ಅಂತಿಮವಾಗಿ ಯುಸಿಸಿ ಜಾರಿಗೊಳಿಸುತ್ತರೆಯೇ? ಎನ್ನುವುದನ್ನು ತಿಳಿಯಲು ಇನ್ನು ಒಂದು ವಾರ ಕಾಯಬೇಕು.
ಇನ್ನು 2014 ರಲ್ಲಿ, ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಜಾರಿಗೊಳಿಸುವುದಾಗಿ ಭರವಸೆ ನೀಡಿತು ಮತ್ತು 2019 ರ ಪ್ರಣಾಳಿಕೆಯಲ್ಲೂ ಮಹಿಳೆ ಮೀಸಲಾತಿ ಭರವಸೆ ನೀಡಿತ್ತು. ಆದರೆ ಇದುವರೆಗೂ ಈ ನಿಟ್ಟಿನಲ್ಲಿ ಕೇಂದ್ರ ಯಾವುದೇ ಕ್ರಮ ತೆಗೆದುಕೊಂಡಿಲ್ಲ.
ಇದನ್ನೂ ಓದಿ : ಚಂದ್ರಬಾಬು ನಾಯ್ಡು ಬಂಧನ; ಹಿಂಸಾರೂಪ ಪಡೆದ ಬಂದ್, ಹಲವರು ವಶಕ್ಕೆ
ಈಗ ಈ ಮಸೂದೆಯನ್ನು ಅಂಗೀಕರಿಸುವುದರಿಂದ ಪ್ರಧಾನಿ ಮೋದಿ ಮಹಿಳಾ ಮತದಾರರ ಬೆಂಬಲ ಗಳಿಸಬಹುದು ಮತ್ತು ಪ್ರತಿಸ್ಪರ್ಧಿಗಳಿಗೆ ಶಾಕ್ ನೀಡಬಹುದು ಎನ್ನಲಾಗುತ್ತಿದೆ.
ಈ ಬಗ್ಗೆ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಟ್ವೀಟ್ ಮಾಡಿದ್ದು, ಸೆಪ್ಟೆಂಬರ್ 18 ರಿಂದ 22 ರವೆಗೆ 5 ದಿನಗಳ ಸಂಸತ್ ವಿಶೇಷ ಅಧಿವೇಶನ ನಡೆಸಲಾಗುವುದು ಎಂದು ಬರೆದುಕೊಂಡಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.