Monday, December 11, 2023
spot_img
- Advertisement -spot_img

ವಿಜಯೇಂದ್ರ ಪದಗ್ರಹಣ: ಬಿಜೆಪಿ ಕಚೇರಿಯಲ್ಲಿ ಹೋಮ, ಹವನ

ಬೆಂಗಳೂರು: ಬಿಜೆಯಪಿಯ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಪದಗ್ರಹಣ ಹಿನ್ನೆಲೆ ರಾಜ್ಯ ಬಿಜೆಪಿ ಕಚೇರಿ ಮಲ್ಲೇಶ್ವರದ ಜಗನ್ನಾಥ ಭವನದಲ್ಲಿ ಪೂಜೆ, ಹೋಮ, ಹವನ ನಡೆಯಿತು.

ಇಂದು ಬೆಳಿಗ್ಗೆಯಿಂದಲೇ ಬಿಜೆಪಿ ಕಚೇರಿಯಲ್ಲಿ ಹೋಮ, ಹವನ ಪ್ರಾರಂಭವಾಗಿತ್ತು. ಬೆಳಿಗ್ಗೆ 8:45 ರ ಸುಮಾರಿಗೆ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ, ಸಂಸದ ಬಿವೈ ರಾಘವೇಂದ್ರ, ನೂತನ ಅಧ್ಯಕ್ಷ ಬಿವೈ ವಿಜಯೇಂದ್ರ, ನಿರ್ಗಮಿತ ಅಧ್ಯಕ್ಷ ನಳಿನ್ ಕುಮಾರ್‌ ಕಟೀಲ್ ಸೇರಿದಂತೆ ಅನೇಕರು ಆಗಮಿಸಿ ಪೂಜೆಯಲ್ಲಿ ಪಾಲ್ಗೊಂಡರು. ಬಿಜೆಪಿ ಕಾರ್ಕರ್ತರು ಮತ್ತು ಬೆಂಬಲಿಗರು ನಾಯಕರಿಗೆ ಸಾಥ್ ನೀಡಿದರು.

ವಿಜಯೇಂದ್ರ ಪದಗ್ರಹಣ ಹಿನ್ನೆಲೆ ಬಿಜೆಪಿ ಕಚೇರಿಯಲ್ಲಿ ಹಬ್ಬದ ವಾತವಾರಣ ನಿರ್ಮಾಣವಾಗಿದೆ. ಸಂಪೂರ್ಣ ಕಚೇರಿ ಮತ್ತು ಸುತ್ತಮುತ್ತಲ ಪ್ರದೇಶವನ್ನು ತೋರಣ, ಹೂವು, ಹಣ್ಣುಗಳಿಂದ ಸಿಂಗಾರ ಮಾಡಲಾಗಿದೆ. ಕಚೇರಿ ಆವರಣದಲ್ಲಿ ಡೋಲು, ಚೆಂಡೆ, ವಾದ್ಯಗಳನ್ನು ನುಡಿಸಲಾಗುತ್ತಿದೆ. ಕಾರ್ಯಕರ್ತರು ಹೆಜ್ಜೆ ಹಾಕಿ ಸಂಭ್ರಮಿಸುತ್ತಿದ್ದಾರೆ.

ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮಕ್ಕೆ ಸರ್ವರಿಗೂ ಬಹಿರಂಗ ಆಹ್ವಾನ ನೀಡಲಾಗಿದೆ. ಹಾಗಾಗಿ, ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರು ರಾಜ್ಯದ ವಿವಿಧ ಭಾಗಗಳಿಂದ ಬಿಜೆಪಿ ಕಚೇರಿಯತ್ತ ಆಗಮಿಸಿದ್ದಾರೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles