ರಾಮನಗರ : ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಶೀಘ್ರ ಗುಣಮುಖರಾಗಲೆಂದು ಅವರ ಅಭಿಮಾನಿಗಳು ಮತ್ತು ಜೆಡಿಎಸ್ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು.
ಚನ್ನಪಟ್ಟಣ ತಾಲೂಕು ಜೆಡಿಎಸ್ ಕಾರ್ಯಕರ್ತರು ಹಾಗೂ ಹೆಚ್ ಡಿಕೆ ಅಭಿಮಾನಿಗಳಿಂದ ಕೆಂಗಲ್ ಶ್ರೀ ಆಂಜನೇಯನಿಗೆ ವಿಶೇಷ ಪೂಜೆ ನಡೆಯಿತು. ದೇವರಿಗೆ ತುಪ್ಪ ದಾನ ಮಾಡಿದ ಹೆಚ್ ಡಿಕೆ ಅಭಿಮಾನಿಗಳು, 101 ತೆಂಗಿನಕಾಯಿ ಒಡೆದು ದೃಷ್ಟಿದೋಷ ಪರಿಹಾರ ಆಗಲಿ ಎಂದು ಪ್ರಾರ್ಥಿಸಿದರು. ಹೆಚ್ ಡಿಕೆ ಹೆಸರಿನಲ್ಲಿ ಭಕ್ತಾದಿಗಳಿ ಪ್ರಸಾದ ವಿತರಣೆ ಮಾಡಿದರು.
ಇದನ್ನೂ ಓದಿ : ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ! ಬಿ ಎಲ್ ಸಂತೋಷ್ ಸಭೆಗೆ ಹಲವರು ಗೈರು
ತೀವ್ರ ಜ್ವರದಿಂದ ಬಳಲುತ್ತಿದ್ದ ಮಾಜಿ ಸಿಎಂ ಕುಮಾರಸ್ವಾಮಿ ನಿನ್ನೆ (ಆಗಸ್ಟ್ 30) ಬೆಳಿಗ್ಗೆ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ಸಂಜೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿರುವ ಆಸ್ಪತ್ರೆಯ ಅಧಿಕಾರಿಗಳು, ಹೆಚ್ ಡಿಕೆ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ.
ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಹೆಚ್ ಡಿಕೆ ಚೇತರಿಸಿಕೊಂಡಿದ್ದಾರೆ. ನಾಳೆ (ಸೆಪ್ಟೆಂಬರ್ 1) ಡಿಸ್ಚಾರ್ಜ್ ಅಗಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.