ಬೆಂಗಳೂರು : ಕೇಂದ್ರ ಚುನಾವಣಾ ಆಯೋಗದ ವತಿಯಿಂದ ಇಂದು ಮತ್ತು ನಾಳೆ (ನ.18 ಮತ್ತು19) ದೇಶದಾದ್ಯಂತ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಮಿಂಚಿನ ನೋಂದಾವಣೆ) ನಡೆಯಲಿದೆ.
ರಾಜ್ಯದ ಪ್ರತಿ ಮತಗಟ್ಟೆಗಳಲ್ಲಿ ಇಂದು ಮತ್ತು ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿಶೇಷ ನೋಂದಣಿ ಅಭಿಯಾನ ನಡೆಯಲಿದೆ. ಅಧಿಕಾರಿಗಳು ಮತಗಟ್ಟೆಗಳಲ್ಲಿ ಇದ್ದು ಸಾರ್ವಜನಿಕರ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.
ಮತದಾರರು ಪಟ್ಟಿಗೆ ತಮ್ಮ ಹೆಸರು ಸೇರ್ಪಡೆ, ತಿದ್ದುಪಡಿ ಮತ್ತು ಬದಲಾವಣೆ ಮಾಡಿಕೊಳ್ಳಲು ಅವಕಾಶವಿದೆ. ವೋಟರ್ ಹೆಲ್ಪ್‌ಲೈನ್ ಆಪ್ ಮೂಲಕವೂ ಮತದಾರರು ಹೆಸರು ಸೇರ್ಪಡೆ, ತಿದ್ದುಪಡಿ ಮತ್ತು ಬದಲಾವಣೆಗೆ ಅರ್ಜಿ ಸಲ್ಲಿಸಬಹುದು. ಮತಗಟ್ಟೆ ಅಧಿಕಾರಿ ಮತ್ತು ಮತದಾರರ ನೋಂದಣಿ ಅಧಿಕಾರಿಯ ಮೂಲಕವೂ ಅರ್ಜಿ ಸಲ್ಲಿಸಬಹುದು.
ಈ ರೀತಿ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಸೇರ್ಪಡೆ, ಪರಿಷ್ಕರಣೆ ಮಾಡಿ :
ಇಂದು ಮತ್ತು ನಾಳೆ ಆಯಾ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಗಳು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ ಬೂತ್‌ನಲ್ಲಿ ಹಾಜರಿರುತ್ತಾರೆ.
ಹೊಸದಾಗಿ ಸೇರ್ಪಡೆಗೊಳ್ಳುವವರು ನಮೂನೆ -6 ರಲ್ಲಿ ಈ ಕೆಳಗಿನ ದಾಖಲೆಗಳ ಜೆರಾಕ್ಸ್ ಪ್ರತಿಯನ್ನು ಆಯಾ ಬೂತ್‌ನಲ್ಲಿ ಸಲ್ಲಿಸಬೇಕು :
- ಪೋಟೋ – 1
- ಆಧಾರ್ ಜೆರಾಕ್ಸ್ – 1
- ಪಡಿತರ ಚೀಟಿ ಜೆರಾಕ್ಸ್ – 1
- ಶಾಲಾ ಟಿ.ಸಿ ಅಥವಾ ಜನನ ಸರ್ಟಿಫಿಕೇಟ್ ಜೆರಾಕ್ಸ್ – 1
- ಮನೆತೆರಿಗೆ ರಶೀದಿ ಜೆರಾಕ್ಸ್-1
- ಮೊಬೈಲ್ ನಂಬರ್
ಹೊಸದಾಗಿ ಸೇರ್ಪಡೆಗೆ ನಮೂನೆ-6, ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಲು ನಮೂನೆ-7, ಆಧಾರ್ ಜೋಡನೆಗೆ ನಮೂನೆ-6ಬಿ, ವಿಳಾಸ ಬದಲಾವಣೆ, ಬದಲಿ ಮತದಾರರ ಗುರುತಿನ ಚೀಟಿ, ಮತದರಾರ ಪಟ್ಟಿಯಲ್ಲಿ ತಪ್ಪುಗಳಿದ್ದಲ್ಲಿ ತಿದ್ದುಪಡಿಗೆ ಮತ್ತು ವಿಶೇಷ ಚೇತನ ಮತದಾರರನ್ನು ಗುರುತಿಸಲು ನಮೂನೆ-8ರಲ್ಲಿ ಅರ್ಜಿ ಸಲ್ಲಿಸಿ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.