Friday, September 29, 2023
spot_img
- Advertisement -spot_img

ಕೆಐಎಎಲ್ ಟರ್ಮಿನಲ್-2: ಇಂದಿನಿಂದ ಅಧಿಕೃತ ವಿಮಾನಗಳ ಹಾರಾಟ

ಬೆಂಗಳೂರು : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (KIAL) ವಿಶೇಷ ಗಾರ್ಡನ್ ಹೊಂದಿರುವ ಟರ್ಮಿನಲ್-2ರಲ್ಲಿ ಇಂದಿನಿಂದ ಅಧಿಕೃತವಾಗಿ ವಿದೇಶಿ ವಿಮಾನಗಳು ಕಾರ್ಯಾಚರಣೆ ನಡೆಸಲಿವೆ.

ಕಳೆದ ವರ್ಷ ನವೆಂಬರ್‌ನಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2 ಅನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಉದ್ಘಾಟಿಸಿದ್ದರು. ಬಹು ನಿರೀಕ್ಷಿತ, ಅತ್ಯಾಧುನಿಕ ತಂತ್ರಜ್ಞಾನವುಳ್ಳ ಟರ್ಮಿನಲ್-2 ಇಂದಿನಿಂದ ಅಂತರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಮುಕ್ತವಾಗಿದೆ. 5 ಸಾವಿರ ಕೋಟಿ ‌ವೆಚ್ಚದಲ್ಲಿ‌ ನಿರ್ಮಾಣವಾಗಿರುವ ಗಾರ್ಡನ್ ಟರ್ಮಿನಲ್-2ರಲ್ಲಿ ಇಂದು ಬೆಳಿಗ್ಗೆ 10.45ಕ್ಕೆ ಮೊದಲ ವಿದೇಶಿ ವಿಮಾನ ಬಂದಿಳಿದಿದೆ.

ಇದನ್ನೂ ಓದಿ : ಇಂದು ಡಿಸಿ, ಸಿಇಒಗಳ ಜೊತೆ ಸಿಎಂ ಮಹತ್ವದ ಸಭೆ

ಟರ್ಮಿನಲ್-2 ವಿಶೇಷತೆ ಏನು?

  • ಟರ್ಮಿನಲ್-2, 2 ಲಕ್ಷ 55 ಸಾವಿರದ 661 ಚದರ ಮೀಟರ್ ಚದರ ಅಡಿ ಜಾಗದಲ್ಲಿ ನಿರ್ಮಿಸಲಾಗಿದೆ.
  • 10 ಸಾವಿರ ಚದರ‌ ಮೀಟರ್ ಹಸಿರು ಗೋಡೆ, ಕೃತಕ ವಾಟರ್ ಪಾಲ್ಸ್, ನೂರಾರು ವರ್ಷಗಳ ಹಳೆಯ ಮರಮಟ್ಟು ಬಳಸಿ ವಿನ್ಯಾಸಗೊಳಿಸಲಾಗಿದೆ.
  • ಪ್ರತ್ಯೇಕ ಆಗಮ‌ನ ಹಾಗೂ ನಿರ್ಗಮನ ವ್ಯವಸ್ಥೆ ಹೊಂದಿರುವ ಟರ್ಮಿನಲ್ ಇದಾಗಿದೆ.
  • ವಾರ್ಷಿಕ 25 ಮಿಲಿಯನ್ (2.5ಕೋಟಿ) ಪ್ರಯಾಣಿಕರು ಸಂಚರಿಸಬಹುದಾದ ದೊಡ್ಡ ಟರ್ಮಿನಲ್.
  • 5 ಜಿ ನೆಟ್ವರ್ಕ್ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನದ ಚೆಕ್ ಇನ್, ಬ್ಯಾಗೇಜ್ ಡ್ರಾಪ್ ಕೌಂಟರ್ ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ :ದೆಹಲಿ ಘೋಷಣೆ’ಗಳ ಪ್ರತಿ ಪದಗಳಿಗೂ ಜಿ20 ದೇಶಗಳು ಸಹಮತಿಸಿವೆ: ಬಿಜೆಪಿ

ಆಗಸ್ಟ್‌ 31 ರಿಂದಲೇ ಟರ್ಮಿನಲ್‌-2ರಿಂದ ಅಂತರಾಷ್ಟ್ರೀಯ ವಿಮಾನಯಾನ ಅಧಿಕೃತವಾಗಿ ಪ್ರಾರಂಭವಾಗಬೇಕಿತ್ತು. ಆದರೆ, ತಾಂತ್ರಿಕ ಅಡೆತಡೆ ಹಾಗೂ ಪ್ರಯಾಣಿಕರ ಸುರಕ್ಷತಾ ದೃಷ್ಟಿಯಿಂದ ಕೊನೆ ಕ್ಷಣದಲ್ಲಿ ವಿಮಾನ ನಿಲ್ದಾಣದ ನಿರ್ವಹಣಾ ಮಂಡಳಿಯೂ ಈ ಯೋಜನೆಯನ್ನು ಮುಂದೂಡಿತ್ತು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles