ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರಿಗೆ ಭದ್ರತೆ ನೀಡುವ ವಿಶೇಷ ರಕ್ಷಣಾ ಪಡೆ (ಎಸ್ ಪಿಜಿ) ನಿರ್ದೇಶಕ ಅರುಣ್ ಕುಮಾರ್ ಸಿನ್ಹಾ ಇಂದು (ಬುಧವಾರ) ಮುಂಜಾನೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕ್ಯಾನ್ಸರ್ ನಿಂದ ಬಳಲುತ್ತಿದ್ದ ಸಿನ್ಹಾ ಅವರು, ಕಳೆದ ಕೆಲ ತಿಂಗಳುಗಳಿಂದ ಮೇದಾಂತ ಕ್ಯಾನ್ಸರ್ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೇರಳದ ಉನ್ನತ ಐಪಿಎಸ್ ಅಧಿಕಾರಿಯಾಗಿದ್ದ ಸಿನ್ಹಾ ಅವರು, ನಾಲ್ಕು ವರ್ಷಗಳ ಹಿಂದೆ ಕೇಂದ್ರ ನಿಯೋಜನೆಯ ಮೇಲೆ ಕೇರಳ ಬಿಟ್ಟು ಎಸ್ಪಿಜಿಗೆ ಸೇರ್ಪಡೆಯಾಗಿದ್ದರು.
ಈ ವರ್ಷ ಮೇ ತಿಂಗಳಲ್ಲಿ ನಿವೃತ್ತರಾದರೂ, ಸಿನ್ಹಾ ಅವರ ಅಧಿಕಾರ ಅವಧಿಯನ್ನು ವಿಸ್ತರಣೆ ಮಾಡಲಾಗಿತ್ತು. ಅರುಣ್ ಕುಮಾರ್ ಸಿನ್ಹಾ ಅವರು 1987 ರಲ್ಲಿ ಕೇರಳ ಪೊಲೀಸ್ ಕೇಡರ್‌ಗೆ ಸೇರಿದರು ಮತ್ತು ಅಂದಿನಿಂದ ರಾಜ್ಯದಲ್ಲಿ ಅನೇಕ ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.