ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ಹುಸ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ‘2023ಕ್ಕೆ ಮತ್ತೊಮ್ಮೆ ಶಾಸಕರು ಎಸ್.ಆರ್. ವಿಶ್ವನಾಥ್’ ಕಾರ್ಯಕ್ರಮದಲ್ಲಿ ರೌಡಿಗಳು ಭಾಗಿಯಾಗಿದ್ದು, ಈ ಕಾರ್ಯಕ್ರಮದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಕಾರ್ಯಕ್ರಮದಲ್ಲಿ ರೌಡಿಶೀಟರ್ ಬೆತ್ತನಗೆರೆ ಮಂಜ, ಹುಸ್ಕೂರು ಶಿವ ಭಾಗಿಯಾಗಿದ್ದಾರೆ. ಬಿಜೆಪಿಯ ಕೆಲ ನಾಯಕರು ಕುಖ್ಯಾತ ರೌಡಿಶೀಟರ್ಗಳ ಜೊತೆ ಕಾಣಿಸಿಕೊಳ್ಳುತ್ತಿದ್ದಾರೆ. ಸೈಲೆಂಟ್ ಸುನೀಲ ಬಿಜೆಪಿ ನಾಯಕರೊಂದಿಗೆ ಗುರುತಿಸಿಕೊಂಡ ವೇಳೆ ಭಾರೀ ಟೀಕೆಗಳು ವ್ಯಕ್ತವಾಗಿದ್ದವು. ಬಳಿಕ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಭೇಟಿ ತೀವ್ರ ಕುತೂಹಲ ಮೂಡಿಸಿತ್ತು.
ತದನಂತರದ ದಿನಗಳಲ್ಲಿ ಬೆಂಗಳೂರಿನ ರಾಜಾಜಿನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಎಂಎಲ್ಸಿ ಪುಟ್ಟಣ್ಣ ಜೊತೆ ಮಾಜಿ ರೌಡಿ ಜೇಡರಹಳ್ಳಿ ಕೃಷ್ಣಪ್ಪ ವೇದಿಕೆ ಹಂಚಿಕೊಂಡಿದ್ದ. ನೆಲಮಂಗಲದ ನಟೋರಿಯಸ್ ರೌಡಿ ಶೀಟರ್ ಬೆತ್ತನಗೆರೆ ಶಂಕರ ಬಿಜೆಪಿ ಸೇರ್ತಾರೆ ಅನ್ನೋ ಸುದ್ದಿ ಹರಿದಾಡಿತ್ತು. ಬೆತ್ತನಗೆರೆ ಶಂಕರ ಅಂತಿದ್ದ ತನ್ನ ಹೆಸರನ್ನು ನಲ್ಲೂರು ಶಂಕರ್‌ಗೌಡ ಎಂದು ಬದಲಾಯಿಸಿ ಬಿಜೆಪಿ ಸೇರ್ಪಡೆಗೆ ಮುಂದಾಗಿದ್ದಾನೆ.