ಕೋಲಾರ: ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸಿಲ್ಲಾಂದ್ರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಶಾಸಕ ಶ್ರೀನಿವಾಸಗೌಡ ಹೇಳಿದ್ದಾರೆ.
ಕೋಲಾರದಿಂದ ಸ್ಪರ್ಧಿಸದಂತೆ ಸಿದ್ದರಾಮಯ್ಯಗೆ ಹೈಕಮಾಂಡ್ ಸಲಹೆ ನೀಡಿದ ವಿಚಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದರು. ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ. ಕೋಲಾರದಲ್ಲಿ ಅವರು ಸ್ಪರ್ಧಿಸಿದರೆ ಕೆಲಸ ಮಾಡುವೆ ಎಂದು ತಿಳಿಸಿದ್ದಾರೆ. ಕೋಲಾರದಿಂದ 2ನೇ ಮುಖ್ಯಮಂತ್ರಿಯನ್ನು ರಾಜ್ಯಕ್ಕೆ ಕೊಡಬೇಕು ಎಂಬ ಆಸೆ ಇತ್ತು ಎಂದರು. ನನ್ನನ್ನು ಕರೆದು ಮಾತಾಡಿದ ಬಳಿಕ ಕ್ಷೇತ್ರ ಬಿಟ್ಟು ಕೊಟ್ಟಿದ್ದೇನೆ. ಈಗ ನನ್ನನ್ನು ಕೇಳದೆ ನಿರ್ಧಾರ ಕೈಗೊಂಡರೆ ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸುವುದಿಲ್ಲ ಎಂಬ ಸುಳಿವು ನೀಡಿದ್ದು, ಮುಂದಿನ ಎರಡು ದಿನಗಳಲ್ಲಿ ನಿರ್ಧಾರ ಪ್ರಕಟಿಸುವುದಾಗಿಯೂ ಹೇಳಿದ್ದಾರೆ. ಸಿದ್ದರಾಮಯ್ಯ ಕೋಲಾರದಲ್ಲಿ ನಾಮಪತ್ರ ಸಲ್ಲಿಸಿ ರಾಜ್ಯದಲ್ಲಿಪ್ರ ವಾಸ ಮಾಡಲಿ, ನನ್ನ ಮುಂದಾಳ ತ್ವದಲ್ಲೇ ಅವರನ್ನು ಗೆಲ್ಲಿಸುತ್ತೇನೆ ಎಂದು ಶಾಸಕ ಕೆ.ಶ್ರೀನಿವಾಸಗೌಡ ಹೇಳಿದ್ದರು. ಆದ್ರೆ ಹೈಕಮಾಂಡ್ ಕೋಲಾರದಲ್ಲಿ ಸ್ಪರ್ಧಿಸಬೇಡಿ ಎಂದು ಹೇಳಿದ್ದರು, ಈ ವಿಚಾರವಾಗಿ ಶ್ರೀನಿವಾಸಗೌಡ ತಮ್ಮ ಅಸಾಮಾಧಾನ ಹೊರಹಾಕಿದ್ದಾರೆ.