ಚಾಮರಾಜನಗರ: ಮುಂದಿನ ಲೋಕಸಭಾ ಚುನಾವಣೆಗೆ ನಾನು ಸ್ಪರ್ಧಿಸಲ್ಲ, ಲೋಕಸಭೆ ಅವಧಿ ಮುಗಿದ ಕೂಡಲೇ ರಾಜಕೀಯಕ್ಕೆ ವಿದಾಯ ಹೇಳುತ್ತೇನೆ ಎಂದು ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ತಿಳಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್‌ನಿಂದ ರಾಜಕೀಯ ಆರಂಭಿಸಿದ್ದ ಶ್ರೀನಿವಾಸ ಪ್ರಸಾದ್ ಮುಂದಿನ ವರ್ಷ ನನ್ನ ಅವಧಿ ಮುಕ್ತಾಯವಾಗಲಿದೆ, ಸುದೀರ್ಘ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲದೆ ಕೆಲಸ ಮಾಡಿದ್ದೇನೆ. ಒಟ್ಟಾರೆ ಏಳು ಪ್ರಧಾನ ಮಂತ್ರಿಗಳನ್ನ ಕಂಡಿದ್ದೇನೆ. ಇನ್ನು ಮುಂದೆ ನಾನು ಚುನಾವಣೆ ರಾಜಕೀಯದಿಂದ ಸಕ್ರಿಯವಾಗಿ ಹಿಂದೆ ಸರಿಯುತ್ತೇನೆ ಎಂದು ಹೇಳಿದರು.
ನನಗೆ ರಾಜಕೀಯ ಸಾಕಾಗಿದೆ. ನನಗೆ ನಿಂತುಕೊಂಡು ಭಾಷಣ ಮಾಡಲು ಆಗುತ್ತಿಲ್ಲ ಎಂದಿದ್ದರು. ಕರ್ನಾಟಕ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಕ್ಷದ ನಾಯಕರು ಪಕ್ಷ ತೊರೆದು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸುತ್ತಿದ್ದಾರೆ. ಈಶ್ವರಪ್ಪ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ.
ಶಿವಮೊಗ್ಗ ನಗರ ಕ್ಷೇತ್ರವನ್ನು ಪ್ರತಿನಿಧಿಸುವ ಈಶ್ವರಪ್ಪ ಯಾವುದೇ ಕ್ಷೇತ್ರದಿಂದ ಉಮೇದುವಾರಿಕೆಗೆ ತಮ್ಮನ್ನು ಪರಿಗಣಿಸದಂತೆ ಮನವಿ ಮಾಡಿದ್ದರು. ಸುಳ್ಯ ಮೀಸಲು ಕ್ಷೇತ್ರದಿಂದ ಆರು ಬಾರಿ ಶಾಸಕರಾಗಿದ್ದ ಮೀನುಗಾರಿಕಾ ಸಚಿವ ಎಸ್ ಅಂಗಾರ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
ಬಿಜೆಪಿ ಮುಖಂಡ ಲಕ್ಷ್ಮಣ್ ಸವದಿ ಕೇಸರಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಮತ್ತು ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.