ಬಳ್ಳಾರಿ: ಸತತ ನಾಲ್ಕು ಬಾರಿ ಶಾಸಕ ಹಾಗೂ ಒಮ್ಮೆ ಸಂಸದರಾಗಿ ಆಯ್ಕೆಯಾಗಿದ್ದ ಶ್ರೀರಾಮುಲು ಬಳ್ಳಾರಿಯಲ್ಲಿ ಗ್ರಾಮೀಣದಲ್ಲಿ ಹೀನಾಯ ಸೋಲನ್ನು ಅನುಭವಿಸಿದ್ದಾರೆ.
ಬಳ್ಳಾರಿ ಗ್ರಾಮಾಂತರದಲ್ಲಿ ಶ್ರೀರಾಮುಲು ವಿರುದ್ಧ ಕಾಂಗ್ರೆಸ್‍ನ ಹಾಲಿ ಶಾಸಕ ನಾಗೇಂದ್ರಗೆ ಭರ್ಜರಿ ಜಯ ಸಿಕ್ಕಿದೆ.ಕಳೆದ ಬಾರಿ ಮೊಳಕಾಲ್ಮೂರು, ಬಾದಾಮಿ ಎರಡೂ ಕಡೆ ನಿಂತು ಮೊಳಕಾಲ್ಮೂರಿನಲ್ಲಿ ಜಯ ಸಾಧಿಸಿದ್ದರು.ಚಾಮರಾಜನಗರ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣಗೆ ಸೋಲಾಗಿದೆ, ಅಷ್ಟೇ ಅಲ್ಲದೇ ಬಿಜೆಪಿಯ ಪ್ರಮುಖ ನಾಯಕರಲ್ಲಿಹಾಸನದ ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ, ವಿರಾಜ ಪೇಟೆ ಅಭ್ಯರ್ಥಿ ಕೆ.ಜೆ.ಬೋಪಯ್ಯ ಸೋತಿದ್ದಾರೆ.
ಬಸವರಾಜ ಬೊಮ್ಮಾಯಿ- ಬಿಜೆಪಿ- ಶಿಗ್ಗಾಂವಿಯಲ್ಲಿ ಗೆದ್ದರೆ, ಡಿಕೆಶಿವಕುಮಾರ್- ಕಾಂಗ್ರೆಸ್ -ಕನಕಪುರದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಸಿದ್ದರಾಮಯ್ಯ- ಕಾಂಗ್ರೆಸ್ ವರುಣಾದಲ್ಲಿ ಮುನ್ನಡೆ ಸಾಧಿಸಿದ್ದಾರೆ. ಆರಗ ಜ್ಞಾನೇಂದ್ರ -ಬಿಜೆಪಿಯಿಂದ ತೀರ್ಥಹಳ್ಳಿಯಲ್ಲಿ ಮುನ್ನಡೆ ಸಾಧಿಸಿದ್ದಾರೆ. ಇನ್ನೂ ರಾಜ್ಯ ವಿಧಾನಸಭಾ ಚುನಾವಣೆಗೆ ಮತ ಏಣಿಕೆ ಈಗಾಗಲೇ ನಡೆಯುತ್ತಿದ್ದು, ಕಾಂಗ್ರೆಸ್ ಮುನ್ನಡೆ ಸಾಧಿಸುತ್ತಿದ್ದಂತೆ ಅಭ್ಯರ್ಥಿಗಳು ರೆಸಾರ್ಟ್‍ಗೆ ಹೊರಟಿದ್ದಾರೆ.
2023ರ ಕರ್ನಾಟಕ ಚುನಾವಣೆಯ ಮತ ಎಣಿಕೆಯಲ್ಲಿ ಕೈ ಅಭ್ಯರ್ಥಿಗಳು ಮುನ್ನಡೆ ಸಾಧಿಸುತ್ತಿದ್ದಂತೆ ದೆಹಲಿಯ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.