Saturday, June 10, 2023
spot_img
- Advertisement -spot_img

ಎಸ್ಎಸ್ಎಲ್‌ಸಿ ಪರೀಕ್ಷೆ ಇಂದಿನಿಂದ : ಶುಭ ಕೋರಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಎಸ್ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ಇಂದಿನಿಂದ ಆರಂಭವಾಗಲಿದೆ. ರಾಜ್ಯ ವಿಧಾನಸಭಾ ಚುನಾವಣಾ ಪ್ರಕ್ರಿಯೆ ನಡುವೆಯೂ ಏಪ್ರಿಲ್ 15 ರವರೆಗೂ ನಡೆಯಲಿರುವ ಪರೀಕ್ಷೆ ನಡೆಸಲು ಪರೀಕ್ಷಾ ಮಂಡಳಿ ಸಿದ್ದತೆ ಮಾಡಿಕೊಂಡಿದೆ.

ಈ ಬಾರಿ 5,833 ಸರ್ಕಾರಿ ಶಾಲೆ ವಿದ್ಯಾರ್ಥಿಗಳು 3,605 ಅನುದಾನಿತ, 6,060 ಅನುದಾನ ರಹಿತ ಶಾಲೆಗಳ ವಿದ್ಯಾರ್ಥಿಗಳು ಸೇರಿ ಒಟ್ಟಾರೇ 8.42 ಲಕ್ಷ ವಿದ್ಯಾರ್ಥಿಗಳು ಪರಿಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಅಂದಹಾಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಚಿವ ಅಶ್ವತ್ಥ್ ನಾರಾಯಣ್, ಸಿಎಂ ಬೊಮ್ಮಾಯಿ,ಸಚಿವ ಬಿಸಿ ನಾಗೇಶ್ ಶುಭ ಹಾರೈಸಿದ್ದಾರೆ.

ಶುಕ್ರವಾರ ಬೆಳಗ್ಗೆ 10-30 ರಿಂದ ಮಧ್ಯಾಹ್ನ 1-45ರವರೆಗೆ ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠ, ತಮಿಳು, ಉರ್ದು ಮತ್ತು ಇಂಗ್ಲೀಷ್ ವಿಷಯಗಳ ಪರೀಕ್ಷೆ ನಡೆಯಲಿದೆ. ನಾಳೆ ಗಣಿತ ಮತ್ತು ಸಮಾಜ ಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದ್ದು, ನಕಲು ತಡೆಗೆ ಬಿಗಿ ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರದ ಬಳಿಯಿರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ.

ಪ್ರಿಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳೇ, 2023ರ ಮಾರ್ಚ್ 31 ರಿಂದ ಏಪ್ರಿಲ್ 15ರ ವರೆಗೆ ರಾಜ್ಯಾದ್ಯಂತ ಜರುಗಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗುತ್ತಿರುವ ತಮ್ಮೆಲ್ಲರಿಗೂ ಪ್ರೀತಿ ಪೂರ್ವಕ ಶುಭ ಹಾರೈಕೆಗಳು.ಶೈಕ್ಷಣಿಕ ಜೀವನದ ಇನ್ನೊಂದು ಹಂತಕ್ಕೇರುವ ತುಡಿತದಲ್ಲಿರುವ ತಾವೆಲ್ಲರೂ ಯಾವುದೇ ಆತಂಕ ಮತ್ತು ಭಯವಿಲ್ಲದೇ ಅತ್ಯಂತ ಆತ್ಮ ವಿಶ್ವಾಸದಿಂದ ಪರೀಕ್ಷೆಯನ್ನು ಬರೆದು, ಯಶಸ್ಸನ್ನು ಪಡೆಯಿರಿ.My well wishes go out to everyone who will be taking the SSLC exam in the upcoming state-wide exams scheduled between March 31and April 15, 2023 ಎಂದು ಸಚಿವ ಅಶ್ವತ್ಥ್ ನಾರಾಯಣ್‌ “ಕೂ” ನಲ್ಲಿ ಶುಭ ಹಾರೈಸಿದ್ದಾರೆ.

Related Articles

- Advertisement -spot_img

Latest Articles