ಬೆಂಗಳೂರು: ಎಸ್ಎಸ್ಎಲ್‌ಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ.
ಅಂತಿಮ ಪರೀಕ್ಷೆಗಳು ಮಾರ್ಚ್ 31ರಿಂದ ಆರಂಭವಾಗಲಿದ್ದು, ಏ.15ರವರೆಗೆ ನಡೆಯಲಿದ್ದು, ವಿದ್ಯಾರ್ಥಿಗಳು ಪರೀಕ್ಷಾ ದಿನಗಳಂದು ‘ಪರೀಕ್ಷಾ ಪ್ರವೇಶ ಪತ್ರವನ್ನು’ ತೋರಿಸಿ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಪ್ರಯಾಣಿಸಬಹುದು ಎಂದು ನಿಗಮದ ನಿರ್ದೇಶಕರು ತಿಳಿಸಿದ್ದಾರೆ.