Wednesday, May 31, 2023
spot_img
- Advertisement -spot_img

ನಾಳೆಯಿಂದ ಎಸ್ಎಸ್ಎಲ್‌ಸಿ ಪರೀಕ್ಷೆ : ಮಂಡಳಿಯಿಂದ ಸಕಲ ಸಿದ್ಧತೆ

ಬೆಂಗಳೂರು: ನಾಳೆಯಿಂದ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ರಾಜ್ಯ ಪರೀಕ್ಷಾ ಮಂಡಳಿ ಸಕಲ ಸಿದ್ಧತೆ ಮಾಡಿದೆ. ಮಕ್ಕಳು ಯಾವುದೇ ಭಯವಿಲ್ಲದೇ ನಿಶ್ಚಿಂತೆಯಿಂದ ಪರೀಕ್ಷೆ ಬರೆಯಿರಿ ಎಂದು ಸಚಿವ ಬಿ.ಸಿ.ನಾಗೇಶ್ ಶುಭ ಹಾರೈಸಿದ್ದಾರೆ.

ಎಸ್ಎಸ್ಎಲ್ಸಿ ಪರೀಕ್ಷೆ ಶುಕ್ರವಾರದಿಂದ ಆರಂಭಗೊಳ್ಳುತ್ತಿದ್ದು, ಏಪ್ರಿಲ್ 15 ರವರೆಗೂ ಮುಖ್ಯ ಪರೀಕ್ಷೆ ನಡೆಯಲಿದೆ. ಈ ಬಾರಿಯ ಪರೀಕ್ಷೆಗೆ ಒಟ್ಟು 15,498 ಶಾಲೆಗಳಿಂದ ವಿದ್ಯಾರ್ಥಿಗಳು ನೋಂದಾಯಿತರಾಗಿದ್ದಾರೆ.

ಅಂದಹಾಗೆ ಮಾರ್ಚ್ 31 ಮೊದಲ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ ಪರೀಕ್ಷೆಗಳು ನಡೆಯಲಿವೆ. ಏಪ್ರಿಲ್ 4 ರಂದು ಗಣಿತ, ಸಮಾಜಶಾಸ್ತ್ರ, ಏಪ್ರಿಲ್ 6 ರಂದು ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ, ಏಪ್ರಿಲ್ 8 ರಂದು ಅರ್ಥಶಾಸ್ತ್ರ, ಏಪ್ರಿಲ್ 10 ರಂದು ವಿಜ್ಞಾನ, ರಾಜ್ಯಶಾಸ್ತ್ರ, ಏಪ್ರಿಲ್ 12 ರಂದು ತೃತೀಯ ಭಾಷೆ ಹಿಂದಿ, ಕನ್ನಡ, ಇಂಗ್ಲಿಷ್, ಏಪ್ರಿಲ್ 15 ರಂದು ಸಮಾಜ ವಿಜ್ಞಾನ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ.

5,833 ಸರ್ಕಾರಿ ಶಾಲೆಗಳು, 3,605 ಅನುದಾನಿತ ಶಾಲೆಗಳು ಹಾಗು 6,060 ಅನುದಾನ ರಹಿತ ಶಾಲೆಗಳಿಂದ ಒಟ್ಟು 8,42,811 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ಎಸ್ಎಸ್ಎಲ್ ಸಿಯಲ್ಲಿ ಈ ಬಾರಿ ಒಟ್ಟು 15,498 ಶಾಲೆಗಳ 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗಾಗಿ 3,305 ಪರೀಕ್ಷಾ ಕೇಂದ್ರಗಳನ್ನು ತೆರೆದಿದ್ದು, ಸುಗಮವಾಗಿ ಪರೀಕ್ಷೆ ನಡೆಸಲು ಬೇಕಾದ ಎಲ್ಲ ಸಿದ್ಧತೆ ಮಂಡಳಿ ಮಾಡಿದೆ.

ಬೆಂಗಳೂರು ಸೇರಿ ರಾಜ್ಯಾದ್ಯಂತ 3,305 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಆ ವ್ಯಾಪ್ತಿಯಲ್ಲಿ ಝೆರಾಕ್ಸ್ ಅಂಗಡಿ, ಸೈಬರ್ ಸೆಂಟರ್ ತೆರೆಯುವಂತಿಲ್ಲ ಎಂದು ಸೂಚನೆ ನೀಡಲಾಗಿದೆ.

Related Articles

- Advertisement -

Latest Articles