ಬೆಂಗಳೂರು: ಬಿಜೆಪಿಯಿಂದ ಒಂದು ಹೆಜ್ಜೆ ಹೊರಗಿಟ್ಟಿರುವ ಮಾಜಿ ಸಚಿವ ಎಸ್.ಟಿ. ಸೋಮಶೇಖರ್ ಕಾಂಗ್ರೆಸ್ ನಾಯಕರ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ಮುಂದಾಳತ್ವದಲ್ಲಿ ನಡೆಯಲಿರುವ ಜನಸ್ಪಂದನ ಕಾರ್ಯಕ್ರಮದಲ್ಲಿ ಸೋಮಶೇಖರ್ ಅಧ್ಯಕ್ಷತೆ ವಹಿಸುತ್ತಿದ್ದಾರೆ.
ಇಲ್ಲಿನ ಹೆಮ್ಮಿಗೆಪುರ ವಾರ್ಡ್‌ನ ಮಾಜಿ ಕಾರ್ಪೊರೇಟರ್ ಆರ್ಯ ಶ್ರೀನಿವಾಸ್ ಕಾರ್ಯವ್ಯಾಪ್ತಿಯಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಆರ್ಯ ಶ್ರೀನಿವಾಸ್ ಈಗಾಗಲೇ ಬಿಜೆಪಿ ತೊರೆದು ಡಿಕೆಶಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ್ದಾರೆ. ಇದಕ್ಕೂ ಮೊದಲು ಆರ್ಯ ಶ್ರೀನಿವಾಸ್ ಹುಟ್ಟುಹಬ್ಬದಂದು ಸೋಮಶೇಖರ್ ಭಾಗಿಯಾಗಿ ವೇದಿಕೆ ಹಂಚಿಕೊಂಡಿದ್ದರು. ಹೀಗಾಗಿ ಸೋಮಶೇಖರ್ ನಡೆ ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಇದನ್ನೂ ಓದಿ: ‘ಕೈ’ ಹಿಡಿದ ಬೆಂಬಲಿಗನ ಹುಟ್ಟುಹಬ್ಬದಲ್ಲಿ ಸೋಮಶೇಖರ್ ಭಾಗಿ; ಮೋದಿ ಕಾರ್ಯಕ್ರಮದಿಂದ ದೂರ!
ಜನಸ್ಪಂದನ ಕಾರ್ಯಕ್ರಮದ ಮೂಲಕ ಎಸ್.ಟಿ ಸೋಮಶೇಖರ್ ಕಾಂಗ್ರೆಸ್‌ಗೆ ಮತ್ತಷ್ಟು ಹತ್ತಿರವಾಗಲು ಹೊರಟಿದ್ದಾರೆ ಎನ್ನಲಾಗುತ್ತಿದೆ. ಇತ್ತ ಡಿ.ಕೆ ಶಿವಕುಮಾರ್ ಸಹ ಯಶವಂತಪುರ ಕ್ಷೇತ್ರದ ಕಡೆ ಹೆಚ್ಚಾಗಿ ಒತ್ತು ನೀಡುತ್ತಿದ್ದು, ಈ ಮೊದಲು ಕೆಂಪೇಗೌಡ ಬಡಾವಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಇದೀಗ ಹೆಮ್ಮಿಗೆಪುರದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸುತ್ತಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.