ಬೆಂಗಳೂರು: ಮಾಜಿ ಸಚಿವ ಎಸ್.ಟಿ.ಸೋಮಶೇಖರ್ ಬಿಜೆಪಿ ವಿರುದ್ಧ ಅಸಮಾಧಾನ ಹೊಂದಿರುವುದು ಬಹಿರಂಗಗೊಂಡಿತ್ತು. ಆದರೆ ಬಿಜೆಪಿ ನಾಯಕರು ಮುನಿಸು ಶಮನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿತ್ತು, ಇಂದು ಅವರು ಪ್ರಧಾನಿ ಮೋದಿ ಕಾರ್ಯಕ್ರಮದ ವೇಳೆ ಎಲ್ಲಿಯೂ ಕಾಣಸಿಗದೆ ಅವರು ಅಸಮಾಧಾನ ನಿವಾರಣೆಯಾಗಿಲ್ಲ ಎನ್ನುವುದನ್ನ ಪರೋಕ್ಷವಾಗಿ ಹೊರಹಾಕಿದ್ದಾರೆ.
ಇದಲ್ಲದೆ ಇತ್ತೀಚಿಗೆ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದ ತಮ್ಮ ಬೆಂಬಲಿಗನ ಹುಟ್ಟುಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ. ಸೋಮಶೇಖರ್ ಬೆಂಬಲಿಗ ಹೆಮ್ಮಿಗೆಪುರ ಮಾಜಿ ಕಾರ್ಪೊರೇಟರ್ ಆರ್ಯ ಶ್ರೀನಿವಾಸ್ ಹುಟ್ಟುಹಬ್ಬದಲ್ಲಿ ಅವರು ಭಾಗಿಯಾಗಿದ್ದರು. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ ಭಾವಚಿತ್ರವಿರುವ ಫ್ಲೆಕ್ಸ್ ಹಾಕಿದ್ದ ವೇದಿಕೆಯಲ್ಲಿ ಸೋಮಶೇಖರ್ ಕಾಣಸಿಕೊಂಡಿದ್ದಾರೆ.
ಇದನ್ನೂ ಓದಿ: ವಿಜ್ಞಾನಿಗಳನ್ನು ಕೊಂಡಾಡಿ ದೆಹಲಿಯತ್ತ ಮುಖಮಾಡಿದ ಮೋದಿ
ಆದರೆ ಇಂದು ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುವಾಗ ಹಲವು ಬಿಜೆಪಿ ನಾಯಕರು ಕಾಣಿಸಿಕೊಂಡರೂ ಎಸ್.ಟಿ.ಸೋಮಶೇಖರ್ ಕಾಣಿಸಿಕೊಂಡಿಲ್ಲ. ಕೆ.ಗೋಪಾಲಯ್ಯ, ಮುನಿರತ್ನ, ಬೈರತಿ ಬಸವರಾಜ್ ಸೇರಿ ಹಲವರು ಕಾಣಿಸಿಕೊಂಡಿದ್ರೂ ಅದೇ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ಎಸ್.ಟಿ.ಸೋಮಶೇಖರ್ ಗೈರಾಗಿದ್ದರು.
ಇದನ್ನೂ ಓದಿ: ಅವಹೇಳನಕಾರಿ ಹೇಳಿಕೆ ಕೇಸ್: ಮಣಿಕಂಠ ರಾಠೋಡ್ ಮತ್ತೆ ಅರೆಸ್ಟ್!
ಇತ್ತೀಚಿಗೆ ಕಾಂಗ್ರೆಸ್ ನಾಯಕರ ಭೇಟಿಯಾಗಿದ್ದ ಎಸ್.ಟಿ.ಸೋಮಶೇಖರ್ ಮತ್ತೆ ಕೈ ಹಿಡಿಯಲಿದ್ದಾರೆ ಎನ್ನಲಾಗಿತ್ತು. ಕಾಂಗ್ರೆಸ್ ಸೇರುವ ತೀರ್ಮಾನ ಮಾಡಿಲ್ಲ ಎಂದು ಖುದ್ದು ಸ್ಪಷ್ಟನೆ ನೀಡಿದ್ದರು. ಆದರೆ ಇಂದಿನ ಅವರ ನಡೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.