Monday, March 27, 2023
spot_img
- Advertisement -spot_img

ರಾಷ್ಟ್ರಪತಿಗಳಿಂದ ನಾಡಹಬ್ಬ ದಸರಾ ಉದ್ಘಾಟನೆಗೆ ಕ್ಷಣಗಣನೆ, ಸಿದ್ಧತೆ ಪರಿಶೀಲಿಸಿದ ಸಚಿವ ಎಸ್‌.ಟಿ.ಸೋಮಶೇಖರ್

ಮೈಸೂರು: ನಾಡಹಬ್ಬ ದಸರಾ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಎಲ್ಲಾ ಸಿದ್ಧತೆಗಳೂ ಅಂತಿಮವಾಗಿದೆ. ರಾಷ್ಟ್ರಪತಿ ಕಚೇರಿಯಿಂದ ಬಂದ ಸೂಚನೆಯಂತೆ ವ್ಯವಸ್ಥೆ ಎಲ್ಲಾ ಮಾಡಲಾಗಿದೆ. ಇನ್ನು ಕಾರ್ಯಕ್ರಮ ವೀಕ್ಷಿಸಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಸಾವಿರಕ್ಕೂ ಅಧಿಕ ಮಂದಿ ಕಾರ್ಯಕ್ರಮವನ್ನು ವೀಕ್ಷಿಸಬಹುದು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ನಾಡಹಬ್ಬ ದಸರಾ ಉದ್ಘಾಟನೆಗೆ ರಾಷ್ಟ್ರಪತಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಉಸ್ತುವಾರಿ ಸಚಿವ ಎಸ್.​ಟಿ.ಸೋಮಶೇಖರ್​ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೇದಿಕೆ ಮೇಲೆ ರಾಷ್ಟ್ರಪತಿಗಳು ಸೇರಿದಂತೆ 13 ಗಣ್ಯರು ಇರಲಿದ್ದಾರೆ. ಸೋಮವಾರ ಬೆಳಗ್ಗೆ 9 ಗಂಟೆಗೆ ಮೈಸೂರಿಗೆ ಆಗಮಿಸುವ ರಾಷ್ಟ್ರಪತಿಗಳು, ದೇವಸ್ಥಾನಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲಿದ್ದಾರೆ. ನಂತರ ವೇದಿಕೆಗೆ ಆಗಮಿಸಿ ದಸರಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬಳಿಕ ಇಲ್ಲಿನ ಬುಡಕಟ್ಟು ಸಮುದಾಯವರನ್ನು ಭೇಟಿ ಮಾಡಿ ಹುಬ್ಬಳ್ಳಿಗೆ ತೆರಳಲಿದ್ದಾರೆ ಎಂದು ಹೇಳಿದರು. ವೇದಿಕೆ ಸಿದ್ಧತೆ, ಗಣ್ಯರು, ಅಧಿಕಾರಿಗಳು, ಸಾರ್ವಜನಿಕರಿಗೆ ಆಸನದ ವ್ಯವಸ್ಥೆ, ಭದ್ರತಾ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಸಿದ್ಧತೆಗಳ ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿಗಳಿಂದ ಕಾರ್ಯಕ್ರಮದ ಸಂಪೂರ್ಣ ಮಾಹಿತಿ ಪಡೆದರು. ಬುಡಕಟ್ಟು ಜನರ ಭೇಟಿಗೆ ಮತ್ತು ಫೋಟೋ ಶೇಷನ್​ಗಾಗಿ 10 ನಿಮಿಷ ಕಾಲವಾಕಾಶ ಮೀಸಲಿಡುವಂತೆ ಅವರಲ್ಲಿ ಮನವಿ ಮಾಡಲಾಗಿದ್ದು, ಅದಕ್ಕೆ ಅವರು ಒಪ್ಪಿಕೊಂಡಿದ್ದಾರೆ ಎಂದು ಹೇಳಿದರು.

Related Articles

- Advertisement -

Latest Articles