ಬೆಂಗಳೂರು : ರಾಜ್ಯದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಕಾರ್ಯಕ್ರಮಕ್ಕೆ ಸ್ಟಾರ್ ಪ್ರಚಾರಕರು ಮೆರಗು ತಂದಿದ್ದರು. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ವರ್ಣರಂಜಿತ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ತಾರೆಯರು ಪಾಲ್ಗೊಂಡು ಅಭಿಮಾನಿಗಳತ್ತ ಕೈ ಬೀಸಿದರು. ನಟ ಶಿವರಾಜ್ ಕುಮಾರ್, ತಮಿಳಿನ ಖ್ಯಾತ ನಟ ಕಮಲ್ ಹಾಸನ್, ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ, ನಟಿ ನಿಶ್ವಿಕಾ ನಾಯ್ಡು, ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು, ನಟರಾದ ಸಾಧು ಕೋಕಿಲಾ, ದುನಿಯಾ ವಿಜಯ್, ಹಿರಿಯ ನಟಿ ಉಮಾಶ್ರೀ ಸೇರಿದಂತೆ ಹಲವರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು.
ಈ ಬಾರಿ ಚುನಾವಣೆಯಲ್ಲೂ ಶಿವರಾಜ್ ಕುಮಾರ್, ದುನಿಯಾ ವಿಜಯ್, ಸಾಧುಕೋಕಿಲಾ, ನಿಶ್ವಿಕಾ ನಾಯ್ಡು, ರಮ್ಯಾ ಸೇರಿದಂತೆ ಹಲವರು ಪ್ರಚಾರದಲ್ಲೂ ಪಾಲ್ಗೊಂಡಿದ್ದರು. ಕೆಲವರು ಸಿದ್ದರಾಮಯ್ಯನವರ ಪರವಾಗಿ ಪ್ರಚಾರದಲ್ಲಿ ತೊಡಗಿದ್ದರೆ, ಇನ್ನೂ ಹಲವರು ಡಿಕೆಶಿಪರ ಪ್ರಚಾರ ಮಾಡಿದ್ದರು. ಅಷ್ಟೇ ಅಲ್ಲದೇ ಎಂಕೆ ಸ್ಟಾಲಿನ್, ಕಮಲ್ ಹಾಸನ್, ಕಾಶ್ಮೀರ ಮಾಜಿ ಸಿಎಂ ಮೆಹಬೂಬು ಮುಫ್ತಿ ಸೇರಿ ಹಲವು ಗಣ್ಯರು ಆಗಮಿಸಿದ್ದರು.