Monday, December 11, 2023
spot_img
- Advertisement -spot_img

ಹೊಸ ಅಧ್ಯಕ್ಷರ ಪದಗ್ರಹಣ ಬಿಜೆಪಿಗೆ “ಕೇತು ಗ್ರಹಣ”ವಾಗುವುದು ನಿಶ್ಚಿತ: ಕಮಲದ ಕಾಲೆಳೆದ ‘ಕೈ’

ಬೆಂಗಳೂರು : ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ.ವೈ.ವಿಜಯೇಂದ್ರ ಅವರ ಪದಗ್ರಹಣ ಸಮಾರಂಭದಲ್ಲಿ ನಾನು ಭಾಗವಹಿಸುವುದಿಲ್ಲ ಎಂದಿರುವ ಮಾಜಿ ಸಚಿವ ಸಿಟಿ ರವಿಯವರ ಹೇಳಿಕೆಯನ್ನು ರಾಜಕೀಯವಾಗಿ ಬಳಸಿಕೊಂಡು ಕಾಂಗ್ರೆಸ್ ಬಿಜೆಪಿಯ ಕಾಲೆಳೆದಿದೆ.

ಈ ಕುರಿತು ಟ್ವಿಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಯಡಿಯೂರಪ್ಪನವರ ಪುತ್ರನ ಅಧ್ಯಕ್ಷ ಗಾದಿಯ ಪದಗ್ರಹಣ ಕಾರ್ಯಕ್ರಮಕ್ಕೆ ಹಾಜರಿರುವುದಿಲ್ಲ ಎಂದು ಮುಖಕ್ಕೆ ಹೊಡೆದಂತೆ ಸಿಟಿ ರವಿ ಹೇಳಿದ್ದಾರೆ ಎಂದು ಛೇಡಿಸಿದೆ.

ಇದನ್ನೂ ಓದಿ : ಉಡುಪಿ ಒಂದೇ ಕುಟುಂಬದ ನಾಲ್ವರ ಹತ್ಯೆ ಕೇಸ್: ಸ್ಥಳಕ್ಕೆ ಎಂಎಲ್‌ಸಿ ಮಂಜುನಾಥ್ ಭಂಡಾರಿ ಭೇಟಿ

ಸಿ.ಟಿ. ರವಿಯ ಬಾಯಲ್ಲಿ ಬಂದಿದ್ದು ಕೇವಲ ಅವರೊಬ್ಬರ ಮಾತಲ್ಲ, ಇಡೀ ಸಂತೋಷ ಕೂಟದ ಅಸಹನೆಯ ಮಾತುಗಳು. ನಾನು ಹಿಂದೂ ಹುಲಿ ಎನ್ನುತ್ತಿದ್ದ ಬಚ್ಚಲು ಬಾಯಿಯ ಇಲಿಯಾಗಿ ಬಿಲ ಸೇರಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ಇತ್ತ ಸಿ.ಟಿ ರವಿ ಕುದಿಯುತ್ತಿರುವ ತಾಪ 100 ಡಿಗ್ರಿ ದಾಟಿದೆ!, ಅತ್ತ ಡಾ.ಅಶ್ವಥ್ ನಾರಾಯಣನ ಹತಾಶೆ ಮುಗಿಲು ಮುಟ್ಟಿದೆ. ಹೊಸ ಅಧ್ಯಕ್ಷರ ಪದಗ್ರಹಣವು ಬಿಜೆಪಿಗೆ “ಕೇತು ಗ್ರಹಣ”ವಾಗಿ ಪರಿಣಮಿಸುವುದು ನಿಶ್ಚಿತ ಎಂದು ವ್ಯಂಗ್ಯವಾಡಿದೆ.

ಸಿಟಿ ರವಿ ಹೇಳಿದ್ದೇನು..? ವಿಜಯೇಂದ್ರ ಅವರು ನನ್ನ ಜೊತೆ ಎರಡು ಬಾರಿ ದೂರವಾಣಿ ಮೂಲಕ ಮಾತನಾಡಿದ್ದಾರೆ. ಅವರ ಪದಗ್ರಹಣ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ಆದರೆ, ನ.15ರ ರಾತ್ರಿವರೆಗೂ ಮಧ್ಯಪ್ರದೇಶದಲ್ಲಿ ಚುನಾವಣಾ ಪ್ರಚಾರ ಇದೆ. ಹಾಗಾಗಿ, ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗುವುದಿಲ್ಲ. ಈ ಬಗ್ಗೆ ಅವರಿಗೆ ತಿಳಿಸಿದ್ದೇನೆ ಎಂದು ಸ್ಪಷ್ಟಪಡಿಸಿದ್ದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles