ಬೆಂಗಳೂರು : ಕಾವೇರಿ ಮತ್ತು ಮಹದಾಯಿ ಜಲ ವಿವಾದ ಸಂಬಂಧ ಚರ್ಚಿಸಲು ರಾಜ್ಯ ಸರ್ಕಾರ ನಾಳೆ (ಆಗಸ್ಟ್ 23) ಸರ್ವಪಕ್ಷ ಸಭೆ ಕರೆದಿದೆ. ಈ ಸಭೆಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಪ್ರಮುಖ ನಾಯಕರಿಗೆ ಅಹ್ವಾನ ನೀಡಲಾಗಿದೆ.
ರಾಜ್ಯ ಸರ್ಕಾರದ ಪರವಾಗಿ ಇಂದು ಬಿಜೆಪಿ ಮತ್ತು ಜೆಡಿಎಸ್ ನಾಯಕರನ್ನು ಖುದ್ದು ಭೇಟಿಯಾದ ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್, ಆಹ್ವಾನ ಪತ್ರಿಕೆ ನೀಡಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಮಾಜಿ ಸಿಎಂಗಳಾದ ಬಿ.ಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಗೋವಿಂದ ಕಾರಜೋಳ ಅವರಿಗೆ ಆಹ್ವಾನ ನೀಡಲಾಗಿದೆ.


ಸಭೆಗೆ ಬರಲ್ಲ ಎಂದ ದೇವೇಗೌಡರು : ಸರ್ವಪಕ್ಷ ಸಭೆಗೆ ಮಾಜಿ ಪ್ರಧಾನಿ ದೇವೇಗೌಡರಿಗೆ ಅಹ್ವಾನ ನೀಡಲಾಗಿದೆ. ಪದ್ಮನಾಭನಗರದ ನಿವಾಸದಲ್ಲಿ ದೇವೇಗೌಡರನ್ನು ಖುದ್ದು ಭೇಟಿ ಮಾಡಿದ ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ಅಹ್ವಾನ ನೀಡಿದ್ದಾರೆ.
ಇದನ್ನೂ ಓದಿ : ‘INDIA ಮೈತ್ರಿಗಾಗಿ ಸ್ಟಾಲಿನ್ ಜೊತೆ ಡಿ.ಕೆ ಶಿವಕುಮಾರ್ ಒಳ ಒಪ್ಪಂದ’
ಆದರೆ, ಅನಾರೋಗ್ಯದ ಹಿನ್ನೆಲೆಯಲ್ಲಿ ಸಭೆಗೆ ಬರಲು ಆಗುವುದಿಲ್ಲ, ತಾವುಗಳು ಸಭೆಯನ್ನು ಮಾಡಿ ಒಳ್ಳೆಯದಾಗಲಿ ಎಂದು ದೇವೇಗೌಡರು ತಿಳಿಸಿದ್ದಾರೆ. ಮೊದಲೇ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕಿತ್ತು. ಈಗ ಸಭೆ ಕರೆದಿದ್ದೀರಾ, ಏನಾದರೂ ಸಲಹೆ ಇದ್ರೆ ನೀಡುತ್ತೇನೆ ಎಂದು ದೇವೇಗೌಡರು ನಜೀರ್ ಅಹ್ಮದ್ ಗೆ ಹೇಳಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.