ಬೆಂಗಳೂರು: 2023-24 ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟವಾಗಿದ್ದು, ಸರ್ಕಾರದ ಅಧೀನ ಕಾರ್ಯದರ್ಶಿಗಳು ಮಹಾಂತಯ್ಯ ಎಸ್ ಹೊಸಮಠ ಸುತ್ತೋಲೆ ಹೊರಡಿಸಿದ್ದಾರೆ.
ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರನ್ನು ಒಳಗೊಂಡಂತೆ ಪ್ರಶಸ್ತಿ ನೀಡಲಾಗುತ್ತದೆ, ಮಹಿಳಾ ಶಿಕ್ಷಕಿಯರಿಗೆ ಅಕ್ಷರ ಮಾತೆ ಸಾವಿತ್ರಿಬಾಯಿ ಫುಲೆ ಹೆಸರಿನಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಜಿ-20 ಶೃಂಗ ಸಭೆ : ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿದ ರಾಷ್ಟ್ರಪತಿ ಭವನ






05.09.2023 ರಂದು ನಡೆಯುವ ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆಯಂದು ಪ್ರಶಸ್ತಿ ಪ್ರದಾನ ನಡೆಯಲಿದ್ದು, ಪ್ರಶಸ್ತಿ ಪುರಸ್ಕೃತರಿಗೆ ತಲಾ ರೂ. 25,000/- ರಂತೆ, ಒಟ್ಟು ರೂ. 7,75,000/- ಗಳ ನಗದು ಪುರಸ್ಕಾರ ನಡೆಯಲಿದೆ. ಸದರಿ ವೆಚ್ಚವನ್ನು ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಮತ್ತು ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿಯಿಂದ ಭರಿಸಲು ಅನುಮತಿ ನೀಡಿ ಆದೇಶ ಹೊರಡಿಸಲಾಗಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.