ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ವೈಫಲ್ಯದ ಆರೋಪ ಹೊರಿಸಿ ಬಿಜೆಪಿ ನಾಯಕರು ಹಮ್ಮಿಕೊಂಡಿರುವ ರಾಜ್ಯ ಪ್ರವಾಸಕ್ಕೆ ಇಂದು ಚಾಲನೆ ಸಿಗಲಿದೆ.
ಇಂದು ಬೆಳಿಗ್ಗೆ 10:30 ಗಂಟೆಗೆ ಕೋಲಾರದ ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ಮಹಾಪೂಜೆ ನಡೆಯಲಿದೆ. ಬಳಿಕ ದೇವಸ್ಥಾನದ ಮುಂಭಾಗದಲ್ಲಿ ಸಾರ್ವಜನಿಕ ಸಭೆ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಿ.ಟಿ. ರವಿ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸಲು ವಿಫಲವಾಗಿದೆ. ಕಾವೇರಿ ವಿಚಾರದಲ್ಲಿ ರಾಜ್ಯದ ರೈತರ ಹಿತ ಕಾಪಾಡುತ್ತಿಲ್ಲ. ಇಂಡಿಯಾ ಒಕ್ಕೂಟವನ್ನು ಸಂತಸಪಡಿಸಲು ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದೆ. ರೈತರಿಗೆ ಸಮರ್ಪಕವಾಗಿ ವಿದ್ಯುತ್ ದೊರೆಯುತ್ತಿಲ್ಲ ಇತ್ಯಾದಿ ಆರೋಪಗಳನ್ನು ಹೊರಿಸಿ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಪ್ರವಾಸ ಹಮ್ಮಿಕೊಂಡಿರುವುದಾಗಿ ಬಿಜೆಪಿ ತಿಳಿಸಿದೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.