2021ರ ಡಿಸೆಂಬರ್ 12ರಂದು ರಾಜ್ಯ ಒಕ್ಕಲಿಗರ ಸಂಘದ ಕಾರ್ಯಕಾರಿ ಸಮಿತಿಗೆ 35 ನಿರ್ದೇಶಕರ ಆಯ್ಕೆಗಾಗಿ ಚುನಾವಣೆ ನಡೆದಿತ್ತು. ನಿನ್ನೆ ರಾಜ್ಯ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರ ಆಯ್ಕೆಗೆ ನಡೆದ ಚುನಾವಣೆಯಲ್ಲಿ 34 ನಿರ್ದೇಶಕರು ಪಾಲ್ಗೊಂಡಿದ್ದು, ರಾಜ್ಯ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಹಾಸನ ಜಿಲ್ಲೆಯ ಶ್ರವಣಬೆಳಗೊಳ ಕ್ಷೇತ್ರದ ಜೆಡಿಎಸ್ ಶಾಸಕ ಸಿ.ಎನ್. ಬಾಲಕೃಷ್ಣ ಆಯ್ಕೆಯಾಗಿದ್ದಾರೆ..
ಬಿ.ಕೆಂಚಪ್ಪ ಗೌಡ ಮತ್ತು ಸಿ.ಎನ್. ಬಾಲಕೃಷ್ಣ ನಡುವೆ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರ ಸ್ಥಾನಕ್ಕೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಆದರೆ, ಅಧ್ಯಕ್ಷರ ಆಯ್ಕೆಗಾಗಿ ನಡೆದ ಚುನಾವಣೆಯಲ್ಲಿ ಬಿ. ಕೆಂಚಪ್ಪ ಗೌಡ 14 ಮತ ಪಡೆದರೇ ಸಿ. ಎನ್. ಬಾಲಕೃಷ್ಣ 20 ಮತಗಳನ್ನು ಪಡೆದು ಅಧ್ಯಕ್ಷರ ಪಟ್ಟ ಅಲಂಕರಿಸಿದ್ದಾರೆ.
ಇನ್ನು, ಡಿಸೆಂಬರ್ 12ರಂದು ನಡೆದ ರಾಜ್ಯ ಒಕ್ಕಲಿಗರ ಸಂಘಕ್ಕೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ರಾಜ್ಯ ಒಕ್ಕಲಿಗರ ಸಂಘಕ್ಕೆ ಚುನಾವಣೆಗೆ ಸ್ಪರ್ಧಿಸಿದ್ದ ಮೂವರು ಹೈಕೋರ್ಟ್‌ಗೆ ತರಕಾರು ಅರ್ಜಿಯನ್ನು ಸಲ್ಲಿಕೆ ಮಾಡಿದ್ದಾರೆ.