Thursday, September 28, 2023
spot_img
- Advertisement -spot_img

ರಾಜ್ಯ ಸರ್ಕಾರದ ವಿರುದ್ಧ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ಇಂದು ರಾಜಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಬೆಂಗಳೂರಿನಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

ರಾಜ್ಯದಲ್ಲಿ ಬರಗಾಲ ಇದ್ದರೂ ಸರ್ಕಾರ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ. ಬಿಜೆಪಿ ಅವಧಿಯ ಅಭಿವೃದ್ಧಿ ಯೋಜನೆಗಳಿಗೆ ತಡೆ ನೀಡಲಾಗಿದೆ. ಬಿಜೆಪಿ ಕಾರ್ಯಕರ್ತರ ಮೇಲೆ ಅನಗತ್ಯ ಕೇಸ್ ಹಾಕಿ ಸರ್ಕಾರ ದ್ವೇಷ ಸಾಧಿಸುತ್ತಿದೆ ಇತ್ಯಾದಿ ಆರೋಪಗಳನ್ನು ಮುಂದಿಟ್ಟು ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ.

ಇದನ್ನೂ ಓದಿ : ರಾಮನಗರದಿಂದ ಕನಕಪುರಕ್ಕೆ ಮೆಡಿಕಲ್ ಕಾಲೇಜು ಶಿಫ್ಟ್ : ಸಿಎಂ, ಡಿಸಿಎಂಗೆ ಕಪ್ಪು ಪಟ್ಟಿ ಪ್ರದರ್ಶಿಸಿ ಆಕ್ರೋಶ

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬಿಜೆಪಿ ರಾಜ್ಯ ನಾಯಕರ ನೇತೃತ್ವದಲ್ಲಿ ಪ್ರತಿಭಟನೆ ನಡೆದರೆ, ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ. ಸುಮಾರು 15 ಸಾವಿರ ಜನರನ್ನು ಸೇರಿಸಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಸುತ್ತೇವೆ. ಕಾನೂನು ಸುವ್ಯವಸ್ಥೆ ಹದೆಗೆಟ್ಟರೆ ಅದಕ್ಕೆ ರಾಜ್ಯ ಸರ್ಕಾರವೇ ಹೊಣೆ ಎಂದು ಈಗಾಗಲೇ ಯಡಿಯೂರಪ್ಪ ಹೇಳಿದ್ದಾರೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles